Bengaluru, ಏಪ್ರಿಲ್ 16 -- ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದ ಸೈಟು ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಮಧ್ಯಂತರ ತನಿಖಾ ವರದಿಯ ಬಿ ರಿಪೋರ್ಟ್‌ ವಿರುದ್ಧ ತಕರಾರು ಅರ್ಜಿಗಳನ್ನು ವಿಶೇಷ ಕೋರ್ಟ್ ಸ್ವೀಕರಿಸಿತ್ತು. ಅದರ ವಿಚಾರಣೆ ಮುಂದುವರಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿತ್ತು. ಇಂದು (ಏಪ್ರಿಲ್ 16) ಮುಡಾ ಸೈಟು ಹಂಚಿಕೆ ಅಕ್ರಮದ ಕೇಸ್ ಅನ್ನು ಸಿಬಿಐಗೆ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಕರ್ನಾಟಕ ಹೈಕೋರ್ಟ್‌, ಸಿಎಂ ಸಿದ್ದರಾಮಯ್ಯ ಮತ್ತು ಇತರರಿಗೆ ನೋಟಿಸ್ ಜಾರಿಗೊಳಿಸಿದೆ. ವಿಚಾರಣೆಯನ್ನು ಏಪ್ರಿಲ್ 28ಕ್ಕೆ ಮುಂದೂಡಿದೆ.

ತಮ್ಮ ಪತ್ನಿ ಹೆಸರಿಗೆ ಅಕ್ರಮವಾಗಿ ನಿವೇಶನ ಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್‌ನ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ...