ಭಾರತ, ಫೆಬ್ರವರಿ 10 -- ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ಗೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದ್ದು ಆರೋಪಿ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದಾರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಅವರಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಂತಾಗಿದೆ. ಇಡಿ ನೀಡಿರುವ ಸಮನ್ಸ್ ರದ್ದುಪಡಿಸುವಂತೆ ಕೋರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. ಅದುವರೆಗೂ ಇಡಿ ಸಮನ್ಸ್‌ಗೆ ತಡೆಯಾಜ್ಞೆ ವಿಸ್ತರಣೆಯಾಗಿದೆ.

ಇಡಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ವಾದ ಮಂಡಿಸಿ, ಇಡಿ ಸಮನ್ಸ್ ಜಾರಿಗೊಳಿಸಿದಾಗ ಹೈಕೋರ್ಟ್ ಮಧ್ಯಪ್ರವೇಶ ಮಾಡಬಾರದು. ಈ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಇದ್ದು, ಆರೋಪಿಗೆ ಸಮನ್ಸ್ ಜಾರಿಗೊಳಿಸಬೇಕೆಂಬ ನಿಯಮವಿಲ್ಲ ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತಂದರು.

ಸಚಿವ...