ಭಾರತ, ಫೆಬ್ರವರಿ 18 -- ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ಕೇಳಿ ಬಂದ ಮೈಸೂರು ನಗರಾಭಿವೃಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ತನಿಖೆಗೆ ರಚಿಸಲಾಗಿದ್ದ ಲೋಕಾಯುಕ್ತ ತನಿಖಾ ತಂಡ, ಅಂತಿಮ ವರದಿಯನ್ನು ಸಲ್ಲಿಸಲು ಕಾಲಾವಕಾಶ ಕೋರಿದೆ. ಲೋಕಾಯುಕ್ತ ಪರವಾಗಿ ಹಾಜರಾದ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಅವರು ಅಂತಿಮ ವರದಿ ಸಲ್ಲಿಸಲು ಅಲ್ಪಾವಧಿಯ ಸಮಯಾವಕಾಶ ಕೇಳಿದ್ದರು. ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಗಜಾನನ ಭಟ್ ಅವರು ಸರ್ಕಾರದ ಪರ ವಕೀಲರು ಮಾಡಿದ ಮನವಿಯನ್ನು ಪುರಸ್ಕರಿಸಿ ಮುಂದಿನ ವಿಚಾರಣೆಯನ್ನು ಇದೇ ತಿಂಗಳ 24ಕ್ಕೆ ಮುಂದೂಡಿದರು.

ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಸೂಚನೆಯಂತೆ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ಅವರು ಐದು ದಿನಗಳ ಹಿಂದೆಯೇ ಲೋಕಾಯುಕ್ತ ಎಡಿಜಿಪಿ ಸುಬ್ರಹ್ಮಣೇಶ್ವರ ರಾವ್ ಅವರಿಗೆ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ. ವರದಿ ಲೋಕಾಯುಕ್ತ ಎಡಿಜಿಪಿ ಸುಬ್ರಹ್ಮಣೇಶ್ವರ ರಾವ್ ಮತ್ತು ಹಿರಿಯ ಅಧಿಕಾರಿಗಳು ಪರಿಶ...