Bangalore, ಜನವರಿ 27 -- Mysore Muda Scam: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಮೈಸೂರಿನ ನಗರಾಭಿವೃದ್ದಿ ಪ್ರಾಧಿಕಾರದಿಂದ ಬದಲಿ ನಿವೇಶನಗಳನ್ನು ಹಂಚಿಕೆ ಮಾಡಿದ್ದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಪೂರ್ಣಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪು ಮಾತ್ರ ಬಾಕಿಯಿದೆ. ಅಲ್ಲದೇ ಇದೇ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆಗೆ ಆದೇಶ ನೀಡಿದ್ದ ಹೈಕೋರ್ಟ್‌ ಈ ಸಂಬಂಧ ನಡೆಸಿರುವ ತನಿಖೆಯ ಅಂತಿಮ ವರದಿಯನ್ನು ಸಲ್ಲಿಸಲು ಗಡುವು ವಿಸ್ತರಿಸಿದೆ. ಪ್ರಕರಣದ ಆದೇಶ ನೀಡುವವರೆಗೂ ಲೋಕಾಯುಕ್ತ ಪೊಲೀಸರು ನಡೆಸಿರುವ ತನಿಖಾ ವರದಿಯನ್ನು ಸಲ್ಲಿಸಲು ಕಾಲಾವಾಕಾಶ ನೀಡಲಾಗಿದೆ. ಸದ್ಯದಲ್ಲಿಯೇ ಅಂತಿಮ ತೀರ್ಪು ಹೊರ ಬೀಳುವ ನಿರೀಕ್ಷೆಯಿದೆ.

ಕಳೆದ ವರ್ಷದ ಜುಲೈನಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಹಾಗೂ ಸಂಬಂಧಿಕರಿಗೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ಬದಲಿ ಹದಿನಾಲ್ಕು ನಿವೇಶನಗಳನ್ನು ಹಂ...