ಭಾರತ, ಮೇ 23 -- ಇಸ್ಲಾಮಿಕ್ ರಾಷ್ಟ್ರಗಳ ಸಂಘಟನೆಯ ಸಭೆಯಲ್ಲಿ ಪಾಕಿಸ್ತಾನಕ್ಕೆ ಭಾರಿ ಮುಖಭಂಗವಾಗಿದೆ. ಭಾರತದ ವಿರುದ್ಧ ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನ ಮಂಡಿಸಿದ್ದ ಪ್ರಸ್ತಾವನೆಗೆ ಇಸ್ಲಾಮಿಕ್ ರಾಷ್ಟ್ರಗಳ ಸಭೆಯಲ್ಲಿ ಮೂರು ರಾಷ್ಟ್ರಗಳಿಂದ ವಿರೋಧ ವ್ಯಕ್ತವಾಗಿದ್ದು, ಅವುಗಳನ್ನು ಅದನ್ನು ತಡೆಹಿಡಿದಿವೆ. ಪರಿಣಾಮ ಪಾಕಿಸ್ತಾನಕ್ಕೆ ಭಾರಿ ಮುಖಭಂಗವಾದರೆ, ಭಾರತಕ್ಕೆ ರಾಜತಾಂತ್ರಿಕ ಜಯ ಸಿಕ್ಕಂತಾಗಿದೆ. ಆದಾಗ್ಯೂ, ಪಾಕಿಸ್ತಾನ ಸರ್ಕಾರ ಮಾತ್ರ ತನಗೆ ರಾಜತಾಂತ್ರಿಕ ಗೆಲುವು ಸಿಕ್ಕಿದೆ ಎಂದು ಪ್ರಚಾರ ಮಾಡುತ್ತಿದ್ದು, ಪಾಕಿಸ್ತಾನದ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ. ಇಸ್ಲಾಮಿಕ್ ರಾಷ್ಟ್ರಗಳ ಸಂಘಟನೆ ಸಭೆಯಲ್ಲಿ ಇಂಡೋನೇಷ್ಯಾ, ಈಜಿಪ್ಟ್ ಮತ್ತು ಬಹರೈನ್ ರಾಷ್ಟ್ರಗಳು ಭಾರತದ ಬೆಂಬಲಕ್ಕೆ ನಿಂತಿದ್ದು, ಪಾಕಿಸ್ತಾನದ ಪ್ರಸ್ತಾವನೆಯನ್ನು ತಡೆದಿವೆ.
ಜಕಾರ್ತಾದಲ್ಲಿ ಇಸ್ಲಾಮಿಕ್ ರಾಷ್ಟ್ರಗಳ ಸಂಘಟನೆಯ ಮಹತ್ವದ ಸಭೆ ನಡೆದಾಗ, ಅದರಲ್ಲಿ ಕಾಶ್ಮೀರ ವಿಷಯದಲ್ಲಿ ಭಾರತದ ವಿರುದ್ಧ ಮುಸ್ಲಿಂ ರಾಷ್ಟ್ರಗಳು ಕಠಿಣ ನಿಲುವು ತಾಳ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.