Bangalore, ಮೇ 7 -- ಬೆಂಗಳೂರು: ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಉತ್ತಮಪಡಿಸಲು ಮತ್ತು ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಸದಾ ಮುಂಚೂಣಿಯಲ್ಲಿರುತ್ತದೆ. ಈ ಪ್ರಯತ್ನದ ಭಾಗವಾಗಿ, ಬಿಎಂಆರ್‌ಸಿಎಲ್ ಬೆಂಗಳೂರಿನ ಬೈಯಪ್ಪನಹಳ್ಳಿ ಮೆಟ್ರೋ ನಿಲ್ಯಾಣದಲ್ಲಿ 10 ನೂತನ ಸ್ವಯಂ ಸೇವಾ ಟಿಕೆಟ್ ಯಂತ್ರಗಳನ್ನು ಸ್ಥಾಪಿಸಿದೆ. ಈ ಯಂತ್ರಗಳು QR- ಆಧಾರಿತ ಟಿಕೆಟ್‌ಗಳನ್ನು ತ್ವರಿತವಾಗಿ ಮತ್ತು ಸಂಪರ್ಕ ರಹಿತವಾಗಿ ವಿತರಿಸಲು ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಇದು ಸಾಂಪ್ರದಾಯಿಕ ಏಕ ಪ್ರಯಾಣ ಟೋಕನ್‌ ಗಳನ್ನು ಕ್ರಮೇಣ ಬದಲಾಯಿಸುತ್ತದೆ.ಸರಳವಾದ ಎರಡು-ಹಂತದ ಪ್ರಕ್ರಿಯೆಯೊಂದಿಗೆ, ಪ್ರಯಾಣಿಕರು 30 ಸೆಕೆಂಡುಗಳಿಗಿಂತ ಕಡಿಮೆ ಅವಧಿಯಲ್ಲಿ ಟಿಕೆಟ್ ಪಡೆಯಬಹುದಾಗಿದೆ.

1. ನೀವು ಪ್ರಯಾಣಿಸುವ ಸ್ಥಳ ಆಯ್ಕೆಮಾಡಿ:

ಪ್ರಯಾಣಿಕರು ಡ್ರಾಪ್-ಡೌನ್ ಮೆನು ಅಥವಾ ನಕ್ಷೆಯನ್ನು ಉಪಯೋಗಿಸಿ ಪ್ರಯಾಣಿಸುವ ಜಾಗವನ್ನು ಆಯ್ಕೆ ಮಾಡಬಹುದು. ನಂತರ ಪ್ರಯಾಣಿಕರ ಸಂಖ್ಯೆಯನ್ನು ನ...