Melkote, ಮಾರ್ಚ್ 5 -- Melkote Vairamudi 2025:ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಐತಿಹಾಸಿಕ ಧಾರ್ಮಿಕ ಪ್ರವಾಸ ತಾಣ ಮೇಲುಕೋಟೆಯಲ್ಲಿ ವೈರಮುಡಿ ಉತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಅಲ್ಲದೇ ಎರಡು ವಾರಗಳ ಕಾಲ ನಡೆಯಲಿರುವ ವಿವಿಧ ಧಾರ್ಮಿಕ ಚಟುವಟಿಕೆಗಳ ಪಟ್ಟಿಯನ್ನೂ ಈಗಾಗಲೇ ಅಂತಿಮಗೊಳಿಸಲಾಗಿದೆ. ಆಯಾ ನಕ್ಷತ್ರಕ್ಕೆ ಅನುಗುಣವಾಗಿ ಎರಡು ವಾರಗಳ ಕಾಲ ವೈರಮುಡಿ ಉತ್ಸವ ಮೇಲುಕೋಟೆಯಲ್ಲಿ ನಡೆಯಲಿದೆ. ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು, ಆಂಧ್ರಪ್ರದೇಶದಿಂದಲೂ ಸಹಸ್ರಾರು ಭಕ್ತರು ಮೇಲುಕೋಟೆ ವೈರಮುಡಿ ಉತ್ಸವಕ್ಕೆ ಆಗಮಿಸುವುದರಿಂದ ತಯಾರಿಗಳನ್ನು ಮಂಡ್ಯ ಜಿಲ್ಲಾಡಳಿತ ಹಾಗೂ ಮುಜರಾಯಿ ಇಲಾಖೆಯ ಮೇಲುಕೋಟೆ ಕಚೇರಿಯಿಂದಲೂ ಆರಂಭಿಸಲಾಗಿದೆ. 19 ಲಕ್ಷ ರೂ ವೆಚ್ಚದಲ್ಲಿ ಮೇಲುಕೋಟೆ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಖಾಯಂ ಆಗಿ ಸಿ.ಸಿ ಕ್ಯಾಮರಾ ಅಳವಡಿಸಲು ಯೋಜನೆ ರೂಪಿಸಿದ್ದು, ಸಿ.ಸಿ. ಕ್ಯಾಮರಾದ ನಿರ್ವಹಣೆಯನ್ನು ಮುಂದಿನ ದಿನಗಳಲ್ಲಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಿಂದ ನಿರ್ವಹಿಸುವಂತೆಯೂ ...