ಭಾರತ, ಫೆಬ್ರವರಿ 20 -- Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಫೆಬ್ರುವರಿ 21ರ ಶುಕ್ರವಾರದಿಂದ 27ರ ಗುರುವಾರದವರೆಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಮನಸ್ಸಿಗೆ ಮುದ ನೀಡುವ ಫಲಿತಾಂಶಗಳು ದೊರೆಯುತ್ತವೆ. ಉತ್ತಮ ಆದಾಯವಿರುತ್ತದೆ. ಯುವತಿಯರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಉಂಟಾಗಲಿವೆ. ಒಳ್ಳೆಯ ಮಾತುಕತೆಯಿಂದ ಎದುರಾಗುವ ಸಮಸ್ಯೆಗಳನ್ನು ದೂರ ಮಾಡುವಿರಿ. ಕೃಷಿ ಕಾರ್ಮಿಕರಿಗೆ ವಿಶೇಷ ಲಾಭವಿದೆ. ಮಕ್ಕಳಿಗೆ ಉದ್ಯೋಗ ಲಾಭವಿದೆ. ಅನಾವಶ್ಯಕವಾದ ಖರ್ಚು ವೆ...