ಭಾರತ, ಮಾರ್ಚ್ 3 -- ಬೆಂಗಳೂರು: ಕರ್ನಾಟಕದಲ್ಲಿ ಫೆಬ್ರುವರಿ ತಿಂಗಳಿನಿಂದಲೇ ಸೆಕೆ ಆರಂಭವಾಗಿದೆ. ಕಳೆದ ಕೆಲವು ದಿನಗಳಿಂದ ಉಷ್ಣ ಅಲೆಯ ಹೆಚ್ಚಳವಾಗಿದ್ದು, ಕರಾವಳಿ ಜಿಲ್ಲೆಗಳಂತೂ ಕೆಂಡವಾಗಿದೆ. ತಾಪಮಾನ ಹೆಚ್ಚಳದಿಂದ ವಿಪರೀತ ಸೆಕೆಯಾಗಿ ಜನರು ಹೈರಾಣಾಗಿದ್ದಾರೆ. ಈಗಲೇ ಹೀಗೆ, ಮುಂದೆ ಬೇಸಿಗೆಯ ಸಮಯದಲ್ಲಿ ಹೇಗೆ ಎಂಬ ಚಿಂತೆ ಜನರದ್ದು. ಮಾರ್ಚ್‌ನಿಂದ ಮೇ ತಿಂಗಳ ಅವಧಿಯಲ್ಲಿಯೂ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಈಗಿನಿಂದಲೇ ಜನರು ಆರೋಗ್ಯ ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ. ಮಕ್ಕಳು, ಕಾರ್ಮಿಕರು ಸೇರಿ ವಿವಿಧ ವರ್ಗದ ಜನರು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ತಿಳಿಸಿದೆ.

ಆರೋಗ್ಯ ಇಲಾಖೆಯು ಆರೋಗ್ಯ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದೆ. ಜ್ವರ, ತಲೆನೋವು, ಊತ, ಸ್ನಾಯು ಸೆಳೆತ, ಪ್ರಜ್ಞೆ ತಪ್ಪುವಿಕೆ, ಸುಸ್ತು, ಪಾರ್ಶ್ವವಾಯು ಸೇರಿದಂತೆ ವಿವಿಧ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ತಾಪಮಾನ ಹೆಚ್ಚಳದಿಂದ ಹೃದ್ರೋಗ, ಉಸಿರಾಟ, ಮೂತ್ರಪಿಂಡದ ಸಮಸ...