ಭಾರತ, ಏಪ್ರಿಲ್ 25 -- ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾ ಸದ್ಯಕ್ಕೆ ʻಕೆಡಿʼ ಸಿನಿಮಾ ಕೆಲಸಗಳಲ್ಲಿ ಬಿಜಿಯಾಗಿದ್ದಾರೆ. ಶೂಟಿಂಗ್‌ ಕೆಲಸಗಳನ್ನೂ ಬಹುತೇಕ ಮುಗಿಸಿಕೊಂಡಿದ್ದಾರೆ. ಈ ನಡುವೆ, ಹೊಸ ತಂಡಗಳ ಸಿನಿಮಾ ಪ್ರಯತ್ನಕ್ಕೆ ಬೆನ್ನು ತಟ್ಟುತ್ತ ಬರುತ್ತಿದ್ದಾರೆ. ಟೀಸರ್‌, ಟ್ರೇಲರ್‌ ಇನ್ನಿತ್ಯಾದಿ ಸಿನಿಮಾ ಸಂಬಂಧಿ ಕೆಲಸಗಳಿಗೆ ಬೆಂಬಲ ಸೂಚಿಸುತ್ತಿದ್ದಾರೆ. ಹೀಗಿರುವಾಗಲೇ ಉತ್ತರ ಕರ್ನಾಟಕದ ಜವಾರಿ ಭಾಷೆಯ ಪಪ್ಪಿ ಸಿನಿಮಾವೊಂದು ಇದೀಗ ನಟ ಧ್ರುವ ಸರ್ಜಾಗಿಷ್ಟವಾಗಿದೆ. ಯುವ ಪ್ರತಿಭೆಗಳ ಈ ಚಿತ್ರಕ್ಕೆ ಸಾಥ್‌ ನೀಡಿದ್ದಾರೆ ಧ್ರುವ.

ಹೊಸಬರೇ ಸೇರಿಕೊಂಡು ಉತ್ತರ ಕರ್ನಾಟದ ಭಾಷೆಯಲ್ಲೊಂದು ʻಪಪ್ಪಿʼ ಎಂಬ ಸಿನಿಮಾ ಮಾಡಿದ್ದು, ಈ ಟ್ರೇಲರ್‌ ಈಗಾಗಲೇ ದಾಖಲೆ ಬರೆದಿದೆ. ಟ್ರೇಲರ್‌ ನೋಡಿದವವರೆಲ್ಲರೂ ಹೊಟ್ಟೆ ತುಂಬ ನಕ್ಕು ನಲಿಯುವುದರ ಜೊತೆಗೆ ಭಾವುಕರಾಗಿದ್ದಾರೆ. ಒಂದೊಳ್ಳೆ ಕಥೆ ಹೇಳೋದಿಕ್ಕೆ ಹೊರಟಿರುವ ಯುವ ಪ್ರತಿಭೆಗಳಿಗೆ ಆಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಸಾಥ್‌ ಕೊಟ್ಟಿದ್ದಾರೆ.

ಈ ಹಿಂದೆ ʻಫಸ್ಟ್‌ ಲವ್‌ʼ ಸಿನಿಮಾ ಮಾಡಿ...