ಭಾರತ, ಮೇ 11 -- ಐಪಿಎಲ್ 2025ರ ಆವೃತ್ತಿಯ ಉಳಿದ ಪಂದ್ಯಗಳನ್ನು ಪುನರಾರಂಭಿಸುವ ಮೊದಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಸರ್ಕಾರದ ಅನುಮೋದನೆಗಾಗಿ ಕಾಯುತ್ತಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಪಂದ್ಯಾವಳಿಯ 18ನೇ ಆವೃತ್ತಿಯನ್ನು ಶುಕ್ರವಾರ (ಮೇ 9) ಒಂದು ವಾರದವರೆಗೆ ಸ್ಥಗಿತಗೊಳಿಸಲಾಯಿತು. ಆ ಬಳಿಕ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡ ನಂತರ, ಮುಂದಿನ ವಾರದಲ್ಲಿ ಯಾವುದೇ ಸಮಯದಲ್ಲಿ ಪಂದ್ಯಾವಳಿಯನ್ನು ಪುನರಾರಂಭಿಸುವ ಸಾಧ್ಯತೆ ಇದೆ.

ಹಿಂದೂಸ್ತಾನ್ ಟೈಮ್ಸ್ ಜೊತೆ ಮಾತನಾಡಿದ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಐಪಿಎಲ್‌ ಟೂರ್ನಿಯ 18ನೇ ಆವೃತ್ತಿಯನ್ನು ಪುನರಾರಂಭಿಸಲು ನಿರ್ಧರಿಸುವ ಮೊದಲು ಅಗತ್ಯವಿರುವ ಎಲ್ಲಾ ಮಧ್ಯಸ್ಥಗಾರರನ್ನು ಸಂಪರ್ಕಿಸುತ್ತದೆ ಎಂದು ಹೇಳಿದ್ದಾರೆ.

ಐಪಿಎಲ್ ಪುನರಾರಂಭಿಸಲು ಭಾರತ ಸರ್ಕಾರ ನೀಡುವ ಅನುಮೋದನೆಯೇ ಪ್ರಮುಖ...