ಭಾರತ, ಏಪ್ರಿಲ್ 30 -- ಬೆಂಗಳೂರು: ದೇಶದಾದ್ಯಂತ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವತಿಯಿಂದ 2025ರ ನೀಟ್ (ಯುಜಿ) ಪರೀಕ್ಷೆ ಮೇ 4 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕರ್ನಾಟಕ ರಾಜ್ಯದಾದ್ಯಂತ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷೆಗೆ 1,49,000 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಅವಕಾಶವಿರುತ್ತದೆ.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಲ್ಪಟ್ಟಿರುವ ಐಡಿ/ ಆಧಾರ್ ಕಾರ್ಡ್/ ಪಾನ್ ಕಾರ್ಡ್/ ಡಿ.ಎಲ್/ ವೋಟರ್ ಐಡಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಐಡಿ ಜೊತೆ, ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್ ಸೈಜ್‌ನ ಫೋಟೊಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು. ಬೆಳಿಗ್ಗೆ 11 ಗಂಟೆಯಿಂದ ಎನ್‌ಟಿಎ (NTA) ವತಿಯಿಂದ ನೇಮಿಸಿರುವ ಏಜೆನ್ಸಿಗಳಿಂದ ಸಂಬಂಧಪಟ್ಟ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಹಾ...