Shimoga, ಮೇ 5 -- ಶಿವಮೊಗ್ಗ: ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಯೂ ಅಂಕ ಉತ್ತಮಪಡಿಸಿಕೊಳ್ಳಲು ಬಯಸುವವರು, ಅನುತ್ತೀರ್ಣರಾದವರು ಸೇರಿದಂತೆ 2025ರ ಮೇ 5 ತನಕ ಕನಿಷ್ಠ 64,600 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಮೇ 10 ರವರೆಗೂ ಅರ್ಜಿ ಸಲ್ಲಿಸಲು ಅವಕಾಶ ಇರುವುದರಿಂದ ಇನ್ನಷ್ಟು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ. ಮೇ 26 ರಿಂದ ಜೂನ್ 2ರವರೆಗೆ ಎಸ್ಎಸ್ಎಲ್ಸಿ 2 ಪರೀಕ್ಷೆಗಳು ನಿಗದಿಯಾಗಿವೆ. ವಾರ್ಷಿಕವಾಗಿ ಮೂರು ಪರೀಕ್ಷೆಗಳನ್ನು ನಡೆಸುವ ನಿರ್ಧಾರದಿಂದ ಉತ್ತಮ ಫಲಿತಾಂಶಗಳು ಕಾಣಿಸುತ್ತಿವೆ. ಹೆಚ್ಚಿನ ವಿದ್ಯಾರ್ಥಿಗಳು ಮರುಪರೀಕ್ಷೆಗಾಗಿ ಕೂಡ ಅರ್ಜಿ ಸಲ್ಲಿಸುತ್ತಿದ್ದಾರೆ. ಪಿಯುಸಿ ವಿದ್ಯಾರ್ಥಿಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ -2 ಗೆ ನೊಂದಾಯಿಸಿರುವುದು ಕಂಡುಬಂದಿದೆ ಎನ್ನುವುದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ನುಡಿ.
ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.