ಭಾರತ, ಫೆಬ್ರವರಿ 4 -- ಮೈಸೂರು: ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಮೈಸೂರು ಜಿಲ್ಲೆಯಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಸಾಲದ ಕಿರುಕುಳಕ್ಕೆ ಜಯರಾಮು (55) ಎಂಬವರು ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆ ಎಚ್‌ ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ಘಟನೆ‌ ನಡೆದಿದ್ದು, ರಾಜ್ಯದಲ್ಲಿ ಮೈಕ್ರೋಫೈನಾನ್ಸ್‌ ಸಾಲದ ಕಿರುಕುಳಕ್ಕೆ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ನಿನ್ನೆಯವರೆಗೂ ರಾಜ್ಯದಲ್ಲಿ ಆರು ಮಂದಿ ಸಾಲದ ಕಿರಿಕಿರಿಯಿಂದ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿತ್ತು. ಇದೀಗ ಮೈಸೂರು ಜಿಲ್ಲೆಯಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ.

ಮೃತ ರೈತ ಜಯರಾಮು ಅವರು ಇಕ್ವಿಟಾಸ್, ಜನಬ್ಯಾಂಕ್ ಮೈಕ್ರೋ ಫೈನಾನ್ಸ್‌ನಲ್ಲಿ ಸುಮಾರು 5 ಲಕ್ಷ ಪಡೆದಿದ್ದರು. ಜಮೀನು ಲೀಸ್‌ಗೆ ಪಡೆದು 2 ಎಕರೆಯಲ್ಲಿ ಶುಂಠಿ ಬೆಳೆದಿದ್ದ ಜಯರಾಮು, ಶುಂಠಿ ಬೆಳೆಯ ಬೆಲೆ ಕುಸಿತವಾದ ಹಿನ್ನೆಲೆಯಲ್ಲಿ ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಮೀನಿನಲ್ಲಿ ವಿಷ ಸೇವಿಸಿ ಬದುಕಿಗೆ ಅಂತ್ಯ ಹಾಡಿದ್ದಾರೆ.

ಇಬ...