ಭಾರತ, ಫೆಬ್ರವರಿ 7 -- Karnataka Microfinance Law: ಬಹುನಿರೀಕ್ಷಿತ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿಯಾಗುವುದು ವಿಳಂಬವಾಗಿದೆ. ಕರ್ನಾಟಕ ಸರ್ಕಾರ ಕಳುಹಿಸಿದ್ದ ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿಲ್ಲ. ಕಾನೂನು ಸಂಬಂಧಿಸಿದಂತೆ ಇನ್ನಷ್ಟು ಸ್ಪಷ್ಟೀಕರಣಗಳು ಬೇಕು ಎಂದು ಕೇಳಿರುವುದಾಗಿ ಸಿಎಂ ಕಚೇರಿ ಮೂಲಗಳು ತಿಳಿಸಿವೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಬಲವಂತದ ಸಾಲ ವಸೂಲಿ ಹಾಗೂ ಕಿರುಕುಳಕ್ಕೆ ಬ್ರೇಕ್ ಹಾಕುವ ಸುಗ್ರೀವಾಜ್ಞೆಯ ಪ್ರಸ್ತಾವನೆಯು ಸೋಮವಾರ ರಾಜ್ಯಪಾಲರ ಕಚೇರಿಗೆ ತಲುಪಿತ್ತು. ಅಂತಿಮ ಸುಗ್ರೀವಾಜ್ಞೆ ನಿರ್ಣಯದಲ್ಲಿ ಕಿರುಕುಳ ನೀಡುವವರಿಗೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಹಾಗೂ 5 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸಲು ಅವಕಾಶ ಮಾಡಿ ಕೊಡಲಾಗಿದೆ. ಆದರೆ ಈಗ ರಾಜ್ಯಪಾಲರು ಈ ಸುಗ್ರೀವಾಜ್ಞೆಯನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದು, ಹಲವು ವಿಷಯಗಳ ಬಗ್ಗೆ ಸ್ಪಷ್ಟೀಕರಣ ಕೋರಿದ್ದಾರೆ.

ಮಾಹಿತಿ ಅಪ್ಡೇಟ್ ಆಗುತ್ತಿದೆ.

Published by HT Digital Conten...