Bangalore, ಜನವರಿ 27 -- ಬೆಂಗಳೂರು: ʼರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ ರೂ. ಸಾಲ ನೀಡಿವೆ. ಅಲ್ಲದೆ, ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್‌ಬಿಐ ಮಾರ್ಗಸೂಚಿಗಳನ್ನೇ ಉಲ್ಲಂಘಿಸಿ ಸಾಲ ನೀಡುತ್ತಿವೆ. ಓರ್ವ ವ್ಯಕ್ತಿಗೆ 2ಲಕ್ಷಕ್ಕಿಂತ ಹೆಚ್ಚು ಸಾಲ ನೀಡಬಾರದು ಎಂದು ಆರ್‌ಬಿಐ ಮಾರ್ಗಸೂಚಿ ಇದೆ. ಇದನ್ನು ಯಾರೂ ಅನುಸರಿಸುತ್ತಿಲ್ಲ. ಓರ್ವ ವ್ಯಕ್ತಿಗೆ 5-6 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಈ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಸಾಲ ನೀಡುವಾಗ ಸಾಲ ಪಡೆದವರ ಆರ್ಥಿಕ ಸಾಮರ್ಥ್ಯವನ್ನು ಕಡೆಗಣಿಸಲಾಗುತ್ತಿರುವುದು ಅಹಿತಕರ ಪ್ರಸಂಗಗಳಿಗೆ ಕಾರಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ". ಇದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸರ್ಕಾರದ ಕಂದಾಯ ಇಲಾಖೆ ನೀಡಿರುವ ಕಟ್ಟುನಿಟ್ಟಿನ ಸೂಚನೆ.

ಸಾಲ ಮರುಪಾವತಿ ಮಾಡದಿದ್ದರೆ ಮೈಕ್ರೋ ಫೈನಾನ್ಸ್ ಕಂಪೆನಿಗ...