ಭಾರತ, ಫೆಬ್ರವರಿ 4 -- Karnataka Microfinance Law: ಕರ್ನಾಟಕದಲ್ಲಿ ಹೆಚ್ಚಾಗಿರುವ ಮೈಕ್ರೋ ಫೈನಾನ್ಸ್ ಸಾಲ ವಸೂಲಾತಿ ಅಕ್ರಮ ತಡೆಯಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿದೆ. ಈಗಾಗಲೇ ಸುಗ್ರೀವಾಜ್ಞೆಯ ಕರಡು ಅಂತಿಮಗೊಳಿಸಿ ರಾಜ್ಯಪಾಲ ಥಾವರ್‌ಚಂದ ಗೆಹ್ಲೋಟ್ ಅವರ ಅನುಮೋದನೆಗೆ ಕಳುಹಿಸಿದೆ. ಇಂದು ಅಥವಾ ನಾಳೆ (ಫೆ 5) ಈ ಸುಗ್ರೀವಾಜ್ಞೆ ಆದೇಶಕ್ಕೆ ರಾಜ್ಯಪಾಲರು ಸಹಿ ಹಾಕುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಪ್ರಸ್ತಾವಿತ ಸುಗ್ರೀವಾಜ್ಞೆಯಲ್ಲಿ ಮೈಕ್ರೋ ಫೈನಾನ್ಸ್ ಕಾನೂನು ಉಲ್ಲಂಘನೆಗೆ ಜೈಲು ಶಿಕ್ಷೆಯನ್ನು 3 ವರ್ಷ ಇದ್ದದ್ದನ್ನು 10 ವರ್ಷಕ್ಕೆ ಹೆಚ್ಚಿಸಲಾಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ನೇತೃತ್ವದ ತಜ್ಞರ ಸಮಿತಿ ಶಿಕ್ಷೆ ಪ್ರಮಾಣ ಹೆಚ್ಚಿಸಲು ಶಿಫಾರಸು ಮಾಡಿತು ಎಂದು ಮೂಲಗಳು ಹೇಳಿವೆ.

1) ನೋಂದಣಿ ಆಗದ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ವಸೂಲಿಗೆ ಯಾವುದೇ ರೀತಿಯಲ್ಲೂ ಸಾಲಗಾರರ ಮೇಲೆ ಸಾಲ ಮರುಪಾವತಿ ಮಾಡುವಂತೆ ಒತ್ತಡ ಹಾಕುವಂತಿಲ್ಲ. ಸಾಲ ವಸೂಲ...