ಭಾರತ, ಏಪ್ರಿಲ್ 22 -- ಮೈಸೂರು : ಐಪಿಎಲ್‌ ಕ್ರಿಕೆಟ್‌ ಮ್ಯಾಚ್‌ಗಳ ಜ್ವರ ಏರುತ್ತಿರುವ ನಡುವೆಯೇ ಮೈಸೂರಿನಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌ ದಂಧೆಯೂ ಹೆಚ್ಚಾಗಿದೆ. ಮೈಸೂರಿನಲ್ಲಿ ಹೆಚ್ಚುತ್ತಿರುವ ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ಹೆಚ್ಚಿದ ಮಾಹಿತಿ ಆಧರಿಸಿ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಆರು ಮಂದಿಯನ್ನು ಮೈಸೂರು ನಗರ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ನಜರ್ ಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಯರಗನಹಳ್ಳಿ ಮುಖ್ಯರಸ್ತೆಯ ಗ್ಯಾಸ್ ಸ್ಟೌವ್ ರಿಪೇರಿ ಶಾಪ್ ನಲ್ಲಿ ಆನ್ ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಯುವಕನೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿ, ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾವೇರಿ ಎನ್ ಕ್ಲೇವ್ ರಸ್ತೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿ ಅವರ ಬಳಿಯಿದ್ದ ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಬ್ಬಾಳು ಕೈಗಾರಿಕಾ ಪ್ರದೇಶದ ಡಾಬಾವೊಂದರಲ್ಲಿ ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಮೂವರನ್ನು ...