Bengaluru, ಮೇ 3 -- ಮೈಸೂರು: ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೋರ್ವ ಗಂಭೀರ ಗಾಯಗೊಂಡಿರುವ ಪ್ರಕರಣ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಳಲೆ ಗೇಟ್ ಬಳಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲ ಗ್ರಾಮದ ಚಿನ್ನಸ್ವಾಮಪ್ಪ (55) ಮೃತಪಟ್ಟಿದ್ದು, ಹೆಮ್ಮರಗಾಲ ಗ್ರಾಮದ ರಾಮೇಗೌಡ (55) ಎಂಬವರಿಗೆ ಗಂಭೀರ ಗಾಯಗಳಾಗಿವೆ.
ನಂಜನಗೂಡು ಮತ್ತು ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಳಲೆ ಗ್ರಾಮದ ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದೆ. ಚಿನ್ನಸ್ವಾಮಪ್ಪ ಮತ್ತು ರಾಮೇಗೌಡ ದ್ವಿಚಕ್ರ ವಾಹನದಲ್ಲಿ ಕಳಲೆ ಗ್ರಾಮಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅತಿ ವೇಗವಾಗಿ ಬಂದ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಬೈಕ್ ಸವಾರ ಚಿನ್ನಸ್ವಾಮಪ್ಪ ಸ್ಥಳದಲ್ಲಿಯೇ ಸಾವಿಗೀಡಾಗಿದ್ದರೆ. ರಾಮೇಗೌಡಗೆ ಗಂಭೀರ ಗಾಯವಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಎಎಸ್‌ಪಿ ಮಲ್ಲಿಕ್, ಡಿವೈಎಸ್‌ಪಿ ರಘು, ಸಂಚಾರ ಪೊ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.