Bengaluru, ಮೇ 19 -- ಮೈಸೂರು: ಮನೆಯ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿದ್ದ ಪ್ರಕರಣ ಮೈಸೂರಿನ ಮಂಡಿ ಮೊಹಲ್ಲಾದ ಎಸ್ ಆರ್ ರಸ್ತೆಯ ಅಕ್ಷತಾ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. 20 ವರ್ಷದ ಅನಿಕಾ ಇಲಾಯಿ ಮೃತ ಯುವತಿಯಾಗಿದ್ದು, ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದರು.
ನಿನ್ನೆ ರಾತ್ರಿ ಬಾಲ್ಕನಿಯಲ್ಲಿ ಓಡಾಡುತ್ತಾ ಓದುತ್ತಿದ್ದ ಯುವತಿ ಅಲ್ಲಿಂದ ಕೆಳಗೆ ಬಿದ್ದು ಮೃತಪಟ್ಟಿರಬೇಕು ಎಂದು ಶಂಕಿಸಲಾಗಿದೆ. ಬೆಳಿಗ್ಗೆ ನೋಡಿದಾಗ ಬಾಲ್ಕನಿಯ ಕೆಳಗೆ ಯುವತಿಯ ಮೃತದೇಹ ಪತ್ತೆಯಾಗಿದ್ದು, ಬಾಲ್ಕನಿಯಿಂದ ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಅಪಾರ್ಟ್ಮೆಂಟ್ನ ಮೊದಲ ಮಹಡಿಯಲ್ಲಿ ಅನಿಕಾ ಇಲಾಯಿ ಕುಟುಂಬ ವಾಸವಾಗಿತ್ತು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ರವಾನಿಸಲಾಗಿದ್ದು, ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published by HT Digital Content Services with permission from HT Kannada....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.