Bangalore, ಮೇ 3 -- ಬೆಂಗಳೂರು:ಕರ್ನಾಟಕದಲ್ಲಿ ಬಿಸಿಲು ಹಾಗೂ ಮಳೆಯ ವಾತಾವರಣ ಮುಂದುವರಿದಿದೆ. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡು ಬಂದಿದ್ದರೆ, ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮಳೆಯ ಪ್ರಮಾಣವೂ ಅಧಿಕವಾಗಿದೆ.ಮೈಸೂರು, ಮಂಡ್ಯ, ಹಾಸನ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮೇ 3 ರ ಶನಿವಾರ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ. ಇದಲ್ಲದೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕೊಡಗು ಸಹಿತ ಹದಿಮೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಂತೂ ಕೆಲ ದಿನಗಳಿಂದ ಸಂಜೆ ಎಡಬಿಡದೇ ಮಳೆಯಾಗುತ್ತಿದ್ದು, ಶನಿವಾರ ಸಂಜೆಯೂ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗಬಹುದು ಎನ್ನುವ ಸೂಚನೆಗಳಿವೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗಲಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯ ಒಂದೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.