ಭಾರತ, ಏಪ್ರಿಲ್ 19 -- ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕಾರೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ. ಆದರೆ, ಕಾರಿನಲ್ಲಿದ್ದವರು ಅದೃಷ್ಟವಶಾತ್ ಯಾವುದೇ ಅಪಾಯವಾಗದೆ ಪಾರಾಗಿದ್ದಾರೆ. ಬೆಂಗಳೂರಿನಿಂದ ನಾಡಿನ ಅಧಿದೇವತೆ ಚಾಮುಂಡೇಶ್ವರಿಯ ದರ್ಶನಕ್ಕೆ ಆಗಮಿಸಿದ್ದ ಕುಟುಂಬವಿದ್ದ ಕಾರು ಅಪಘಾತಕ್ಕೀಡಾಗಿದೆ. ಚಾಮುಂಡಿ ಬೆಟ್ಟದಿಂದ ವಾಪಸ್ಸಾಗುವಾಗ ವೇಳೆ ಕಾರು ಪಲ್ಟಿಯಾಗಿದೆ. ರಸ್ತೆಯ ತಡೆಗೋಡೆಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ. ಘಟನೆಯಿಂದ ಯಾರಿಗೂ ಗಾಯಗಳಾಗಿಲ್ಲ. ಈ ಸಂಬಂಧ ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಅತ್ತ ಮೈಸೂರು ತಾಲೂಕಿನ ವಾಜಮಂಗಲ ಗ್ರಾಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿದ ಘಟನೆ ನಡೆಸಿದೆ. ಅಂಬೇಡ್ಕರ್ ನಾಮಫಲಕ, ಬೋರ್ಡ್ ಹಾಗೂ ಫ್ಲೆಕ್ಸ್‌ಗಳನ್ನು ಹರಿದು ಅದಕ್ಕೆ ಸಗಣಿಯಿಂದ ಹೊಡೆದು ವಿಕೃತಿ ಮೆರೆದಿದ್ದಾರೆ. ಘಟನೆಯಿಂದ ವಾಜಮಂಗಲ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸ್ಥಳಕ್ಕೆ ಮೈಸೂರು ಜಿಲ್ಲಾ ಎಸ್‌ಪಿ ಹಾ...