ಭಾರತ, ಫೆಬ್ರವರಿ 22 -- ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಮೇಲೆ‌ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಜನರ ನಡುವೆ ಕೋಮು ಸಂಘರ್ಷ ಹೆಚ್ಚಾಗಲು ಪ್ರೇರೇಪಿಸಿದ್ದಾರೆ ಎಂದು ಸಿಟಿ ರವಿ ವಿರುದ್ಧ ಆರೋಪ ಕೇಳಿಬಂದಿದೆ. ಮುಸ್ಲಿಂ ಸಮುದಾಯದ ಜನರನ್ನು ನಿಂದಿಸಲಾಗಿದೆ ಎಂದು ಜಿಲ್ಲಾ ಯೂತ್ ಕಾಂಗ್ರೆಸ್‌ ದೂರು ದಾಖಲಿಸಿತ್ತು‌.

ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಂಡು, ಉದಯಗಿರಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

(ಸುದ್ದಿ ಅಪ್ಡೇಟ್‌ ಆಗಲಿದೆ)

Published by HT Digital Content Services with permission from HT Kannada....