ಭಾರತ, ಏಪ್ರಿಲ್ 21 -- ಡಾ ಅಂಬೇಡ್ಕರ್‌ಗೆ ಅವಮಾನ: ಮೈಸೂರು ತಾಲೂಕು ವಾಜಮಂಗಲ ಗ್ರಾಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರ ವಿರೂಪಗೊಳಿಸಿ ಅವಮಾನ ಮಾಡಿದ ಘಟನೆ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ, ಡಾ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಆದಷ್ಟು ಬೇಗನೆ ಬಂಧಿಸಿ ಸೂಕ್ರ ಕ್ರಮ ಕೈಗೊಳ್ಳಿ, ಇನ್ನು ಮುಂದೆ ಇಂತಹ ಪ್ರಕರಣಗಳು ಜರುಗದಂತೆ ನೋಡಿಕೊಳ್ಳಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರಿರುವ ವಾಜಮಂಗಲ ಗ್ರಾಮದ ಸಮುದಾಯ ಭವನದ ಬಳಿ ಹಾಕಲಾಗಿದ್ದ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಯಾರೋ ಕಿಡಿಗೇಡಿಗಳು ಅಪಮಾನ ಮಾಡಿರುವ ಹಿನ್ನೆಲೆಯಲ್ಲಿ, ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರು ಆಗಿರುವ ಡಾ. ಯತೀಂದ್ರ ಭೇಟಿ ನೀಡಿ ಡಾ. ಬಿ ಆ ರ್ ಅಂಬೇಡ್ಕರ್ ಅವರ ನಾಮಫಲಕಕ್ಕೆ ಹೂಮಾಲೆ ಹಾಕಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.