Mysuru, ಫೆಬ್ರವರಿ 24 -- ಮೈಸೂರು: ಮೈಸೂರಿನಲ್ಲಿ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣದ ನಂತರ ಮೈಸೂರು ಚಲೋ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದ ಬಿಜೆಪಿ ಹಾಗೂ ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮಿತಿಗೆ ಅನುಮತಿ ದೊರೆತಿದೆ. ಕರ್ನಾಟಕ ಸರ್ಕಾರದ ಗೃಹ ಇಲಾಖೆ ಕಾನೂನು ಮತ್ತು ಸುವ್ಯವಸ್ಥೆಯ ಕಾರಣ ನೀಡಿ ಮೈಸೂರು ಚಲೋಗೆ ಅನುಮತಿ ನೀಡದೇ ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಅನುಮತಿ ಕೋರಿ ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮಿತಿಯು ಹೈಕೋರ್ಟ್‌ ಮೆಟ್ಟಿಲೇರಿತ್ತು. ನ್ಯಾಯಾಲಯವು ಮೈಸೂರು ಚಲೋವನ್ನು ನಿಗದಿತ ಸ್ಥಳದಲ್ಲಿ ಹಾಗೂ ಮಧ್ಯಾಹ್ನದ ಒಂದೂವರೆಗಂಟೆ ಕಾಲ ನಡೆಸಲು ಅನುಮತಿಯನ್ನು ನೀಡಿತ್ತು. ಇದರಿಂದ ಬಿಜೆಪಿ ಸೋಮವಾರ ಮಧ್ಯಾಹ್ನ 3.30 ರಿಂದ ಸಂಜೆ 5 ಗಂಟೆಯವರೆಗೆ ಮೈಸೂರು ಚಲೋ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಿಕೊಂಡಿದೆ.

ಕೋರ್ಟ್‌ ಆದೇಶದ ನಂತರ ಮೈಸೂರಿನ ದೊಡ್ಡಕೆರೆ ಮೈದಾನದಲ್ಲಿ ಕಾರ್ಯಕ್ರಮ ನಡೆಸಲು ರಾಜ್ಯ ಸರ್ಕಾರ ಅವಕಾಶ ಕೊಟ್ಟಿತು. ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಸ್ಥಳ ನಿಗದಿ ಮಾಡಿ...