ಭಾರತ, ಏಪ್ರಿಲ್ 9 -- ಮೈಸೂರು ಜಿಲ್ಲೆಯಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ಹುಣಸೂರು ತಾಲ್ಲೂಕಿನ ಹೈರಿಗೆ ಗ್ರಾಮದ ಬಳಿ ಕಾಣಿಸಿಕೊಂಡಿದ್ದ ಹುಲಿ, ಗ್ರಾಮದ ತಮ್ಮೇಗೌಡರ ಜಮೀನಿನಲ್ಲಿ ಕಾಣಿಸಿದೆ.

ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಕಾರ್ಯಾಚರಣೆ ಆರಂಭವಾಗಿದೆ. ಕಾಡಿಗೆ ವಾಪಸ್ಸಾಗಿದ್ದ ಭಾರೀ ಗಾತ್ರದ ಹುಲಿ ಇದೀಗ ಮತ್ತೆ ಪ್ರತ್ಯಕ್ಷವಾಗಿರುವುದು ಆತಂಕ ಸೃಷ್ಟಿ ಮಾಡಿದೆ.

ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಸಿಬ್ಬಂದಿ.ಸಾಕಾನೆಗಳ ಸಹಾಯ ಪಡೆದುಕೊಂಡಿದ್ದಾರೆ.

ಹೈರಿಗೆ ಗ್ರಾಮಕ್ಕೆ ಆಗಮಿಸಿದ ಭೀಮ ಹಾಗೂ ಜೂನಿಯರ್ ಅಭಿಮನ್ಯು ಆನೆ ಹುಲಿ ಹುಡುಕಾಟಕ್ಕೆ ಸಹಾಯ ಮಾಡುತ್ತಿವೆ. ಕಾರ್ಯಾಚರಣೆಯಲ್ಲಿ 25ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿಗಳು ಭಾಗಿಯಾಗಿದ್ದಾರೆ.

ಹೈರಿಗೆ ಗ್ರಾಮದ ಕೆರೆ ಭಾಗದ ಜಮೀನು, ಮುತ್ತುರಾಯ ಹೊಸಹಳ್ಳಿ ಅರಣ್ಯ ಪ್ರದೇಶದ ಬಳಿ ಕೂಂಬಿಂಗ್ ಕಾರ್ಯಾಚರಣೆ ಆರಂಭವಾಗಿದೆ.

ಕೆರೆ ತೋಟ ಜಮೀನುಗಳಿಗೆ ಹೋಗುವ ಜನರು ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಸಿಬ್ಬಂದಿ ಸೂಚನೆ ನೀಡಿದ್ದಾರೆ.

Published by HT D...