Bengaluru, ಮೇ 19 -- ಮೈಸೂರು: ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದ್ದು, ಆನೆಗಳ ಹಾವಳಿ ತಡೆಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿಗಳು ಮುಂದಾಗುತ್ತಿಲ್ಲವೆಂದು ಆರೋಪಿಸಿ ಅರಣ್ಯ ಇಲಾಖೆ ಸಿಬ್ಬಂದಿಗಳ ವಿರುದ್ಧ ಗ್ರಾಮಸ್ಥರು ತಿರುಗಿ ಬಿದ್ದಿದ್ದಾರೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ತೆಲುಗು ಮಸಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ ವಿರುದ್ಧ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ.
ಮಸಹಳ್ಳಿ ಗ್ರಾಮದಲ್ಲಿ ರೈತರು ಬೆಳೆದಿದ್ದ ಬಾಳೆ ಬೆಳೆ ಸೇರಿದಂತೆ ಇನ್ನಿತರ ಬೆಳೆಗಳನ್ನು ಕಾಡಾನೆಗಳು ತಿಂದು ತೇಗಿವೆ. ಅಲ್ಲದೇ ರೈತರ ಕೃಷಿ ಪಂಪ್‌ಸೆಟ್, ಬೋರ್‌ವೆಲ್, ಶೆಡ್ ಸೇರಿದಂತೆ ಇತರ ಕೃಷಿ ಪರಿಕರಗಳನ್ನು ಕಾಡಾನೆಗಳು ತುಳಿದು ನಾಶಪಡಿಸಿವೆ. ಈ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೆ ತಂದು, ಆನೆಗಳ ಹಾವಳಿ ತಡೆಗಟ್ಟುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು.
ಆದರೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ, ಅರಣ್ಯ ಇಲಾಖೆ ಸಿಬ್ಬಂದಿಗಳ ವಿರುದ್ಧ ಗ್ರಾಮಸ್ಥರು ತಿರುಗಿಬಿದ್ದ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.