Bangalore, ಏಪ್ರಿಲ್ 2 -- ಬೆಂಗಳೂರು: ಮೈಸೂರು ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರಿಗೆ ಮತ್ತೆ ಸಂಕಷ್ಟ ಎದುರಾಗು ಲಕ್ಷಣಗಳು ಗೋಚರಿಸುತ್ತಿವೆ. ಈ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ಅನ್ನು ಜಾರಿ ನಿರ್ದೇಶನಾಲಯ(ಇಡಿ) ಪ್ರಶ್ನಿಸಿ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ತಕರಾರು ಅರ್ಜಿಯನ್ನು ಸಲ್ಲಿಸಿದೆ. ಈ ಪ್ರಕರಣದಲ್ಲಿ ತಾನೂ ಅರ್ಜಿದಾರ ಎಂದು ಇಡಿ ವಾದಿಸಿದೆ. ಕೇಂದ್ರ ತನಿಖಾ ಸಂಸ್ಥೆಯು ತನ್ನ ಅರ್ಜಿಯಲ್ಲಿ PMLA-2002ರ ಉದ್ದೇಶ ಮತ್ತು ಕಾರಣಗಳನ್ನು ಉಲ್ಲೇಖಿಸಿದೆ. ಅಕ್ರಮ ಹಣ ವರ್ಗಾವಣೆಯು ದೇಶದ ಹಣಕಾಸು ವ್ಯವಸ್ಥೆಗೆ ಮಾತ್ರವಲ್ಲದೆ ದೇಶದ ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕೂ ಗಂಭೀರ ಬೆದರಿಕೆಯನ್ನು ಒಡ್ಡುತ್ತದೆ ಎಂಬುದನ್ನು ಅರಿತುಕೊಳ್ಳಬೇಕು ಎನ್ನುವುದು ಜಗತ್ತಿನಾದ್ಯಂತ ಸಾಬೀತಾಗಿದೆ ಎಂದು ಹೇಳಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೇಶ ಬಲಿಪಶುವಾಗಲಿದೆ. ಆದ್ದರಿಂದ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪ...