Mysuru, ಮೇ 13 -- ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಬದಲಿ ನಿವೇಶನ ಪಡೆದು ಆನಂತರ ಅದನ್ನು ವಾಪಸ್ ನೀಡಿದ್ದು ಈಗ ಇತಿಹಾಸ. ಈ ಪ್ರಕರಣದಿಂದ ಸಿದ್ದರಾಮಯ್ಯ ಅವರ ಅನುಗಾಲದ ಆಪ್ತ,ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಕೆ.ಮರೀಗೌಡ ಅವರು ಅಧಿಕಾರವನ್ನು ಕಳೆದುಕೊಳ್ಳಬೇಕಾಯಿತು. ಆರು ತಿಂಗಳಲ್ಲಿಯೇ ಮುಡಾ ಅಧ್ಯಕ್ಷ ಸ್ಥಾನದಿಂದಲೇ ಕೆಳಗೆ ಇಳಿದ ಮರೀಗೌಡ ಅವರು ತಮ್ಮ ರಾಜಕೀಯ ಗುರು ಸಿದ್ದರಾಮಯ್ಯ ಅವರಿಂದಲೇ ದೂರವಾಗುವ ಸನ್ನಿವೇಶ ನಿರ್ಮಾಣವಾಗಿತ್ತು. ಈಗ ಮತ್ತೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿರುವ ಮರೀಗೌಡ ಸೋಮವಾರ ಮೈಸೂರು ಜಿಲ್ಲೆಯ ಎಚ್ಡಿಕೋಟೆ ಕಾರ್ಯಕ್ರಮಕ್ಕೆ ಬಂದಾಗ ಅಲ್ಲಿಯೂ ಜತೆಯಲ್ಲಿಯೇ ಇದ್ದರು. ಆ ಮೂಲಕ ಮತ್ತೆ ರಾಜಕೀಯದಲ್ಲಿ ಸಕ್ರಿಯವಾಗುವ ಸೂಚನೆಯನ್ನು ಮರೀಗೌಡ ನೀಡಿದ್ದಾರೆ.
ಮೈಸೂರು ತಾಲ್ಲೂಕಿನ ಮೆಲ್ಲಹಳ್ಳಿ ಬೀರಿಹುಂಡಿ ಗ್ರಾಮದವರಾದ ಕೆ.ಮರೀಗೌಡ ಮೂರು ದಶಕಕ್ಕೂ ಹೆಚ್ಚು ಕಾಲದಿಂದ ಸಿದ್ದರಾಮಯ್ಯ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.