Bangalore, ಮಾರ್ಚ್ 7 -- ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ತಮ್ಮ ರಾಜಕೀಯ ಗುರುಗಳಾಗಿದ್ದ ಹಾಗೂ ಹಿರಿಯ ರೈತ ನಾಯಕರಾಗಿದ್ದ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ ಹೆಸರಿನಲ್ಲಿ ಸಂಶೋಧನಾ ಪೀಠವೊಂದನ್ನು ಘೋಷಿಸಿದ್ದಾರೆ. ಅದೂ ಸಿದ್ದರಾಮಯ್ಯ ಅವರು ಶಿಕ್ಷಣ ಪಡೆದ ತವರೂರಿನ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರ ಸಂಶೋಧನಾ ಪೀಠ ಆರಂಭಗೊಳ್ಳಲಿದೆ. ಇಲ್ಲಿ ನಂಜುಂಡಸ್ವಾಮಿ ಅವರ ಹೆಸರಿನಲ್ಲಿ ರಾಜಕೀಯ. ಹೋರಾಟ, ಚಳವಳಿ, ರೈತ ವಿಷಯಗಳ ಕುರಿತಾಗಿ ಸಂಶೋಧನೆಯನ್ನು ಕೈಗೊಳ್ಳಲು ಅವಕಾಶ ನೀಡಲಾಗುತ್ತದೆ. ಈ ಮೂಲಕ ಸಿದ್ದರಾಮಯ್ಯ ಅವರು ತಮ್ಮ ಆರಂಭಿಕ ದಿನಗಳಲ್ಲಿ ರಾಜಕೀಯವಾಗಿ ಶಕ್ತಿ ತುಂಬಿದ, ಹಲವು ವಿಚಾರಗಳಲ್ಲಿ ಮಾರ್ಗದರ್ಶಕರಾಗಿದ್ದ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರಿಗೆ ಗೌರವ ಸಲ್ಲಿಸಿದ್ದಾರೆ. ತಮ್ಮ ಹಲವು ಭಾಷಣಗಳಲ್ಲಿ ಸಿದ್ದರಾಮಯ್ಯ ಅವರು ನಂಜುಂಡಸ್ವಾಮಿ ಅವರನ್ನು ನೆನಪಿಸಿಕೊಂಡಿದ್ದಾರೆ.

ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರು ಕರ್ನಾಟಕದಲ್ಲಿ ರೈತ ಚಳವಳಿ...