ಭಾರತ, ಫೆಬ್ರವರಿ 26 -- ಮೈಸೂರು: ನಾಡಿನೆಲ್ಲೆಡೆ ಮಹಾ ಶಿವರಾತ್ರಿ ಸಂಭ್ರಮ ಮನೆ ಮಾಡಿದ್ದು, ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಯಲ್ಲಿ ಮಹಾಶಿವರಾತ್ರಿ ಕಳೆಗಟ್ಟಿದೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜನಗೂಡು ಶ್ರೀಕಂಠೇಶ್ವರ ದೇಗುಲದಲ್ಲಿ, ಮಹಾಶಿವರಾತ್ರಿ ನಿಮಿತ್ತ ಇಂದು ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು, ದೇವರಿಗೆ ಕ್ಷೀರಾಭೀಷೇಕ, ಫಲ ಪಂಚಾಮೃತಾಭಿಷೇಕ, ರುದ್ರಾಭಿಷೇಕಗಳು ನಡೆದವು. ನಂಜುಂಡೇಶ್ವರನ ದರ್ಶನಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸುತ್ತಿರುವುದರಿಂದ, ಕೆಲ ಭಕ್ತರು ದೇವಸ್ಥಾನದ ಹೊರಭಾಗದಲ್ಲಿಯೇ ನಮಿಸಿ ಹೋಗುತ್ತಿದ್ದಾರೆ.
ಕಪಿಲಾ ನದಿ ತೀರದಲ್ಲಿ ಭಕ್ತರು ತುಂಬಿ ತುಳುಕುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ನಂಜನಗೂಡಿನ ದೇವಸ್ಥಾನದ ಮುಂಭಾಗ ಶಿವರಾತ್ರಿಯ ಜಾಗರಣೆ ನಿಮಿತ್ತ ರಾತ್ರಿಯಿಡೀ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಇಷ್ಟೇ ಅಲ್ಲದೆ ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಸಂಖ್ಯೆಯ ಭಕ್ತರು ಆಗಮಿಸಿದ್ದು, ಶಿವನ...
Click here to read full article from source
To read the full article or to get the complete feed from this publication, please
Contact Us.