Bangalore, ಮೇ 22 -- ಬೆಂಗಳೂರು:ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ನಟಿ ತಮನ್ನಾ ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ.ದೀಪಿಕಾ ಪಡುಕೋಣೆ, ರಶ್ಮಿಕಾ ಮಂದಣ್ಣ, ಪೂಜಾ ಹೆಗಡೆ ಅವರ ಹೆಸರನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗಿತ್ತು. ಇದರಲ್ಲಿ ತಮನ್ನಾ ಅವರು ಡಿಜಿಟಲ್ ಲೋಕದಲ್ಲಿ 2.8 ಕೋಟಿ ಪಾಲೋಯರ್ಸ್ ಹೊಂದಿ, ಉಳಿದವರಿಗಿಂತ ಮುಂದಿದ್ದಾರೆ. ಅವರ ವರ್ಚಸ್ಸು, ಡಿಜಿಟಲ್ ಪ್ರಸ್ತುತಿ ಮತ್ತು ಯುವಜನರೊಂದಿಗೆ ಅವರ ಸಂಪರ್ಕ ಇವುಗಳನ್ನು ಮಾತ್ರ ಪರಿಗಣಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಗುರುವಾರ ಸ್ಪಷ್ಟಪಡಿಸಿದ್ದಾರೆ.

ತಮನ್ನಾ ಅವರನ್ನು 6.2 ಕೋಟಿ ರೂಪಾಯಿ ಸಂಭಾವನೆಯೊಂದಿಗೆ ಎರಡು ವರ್ಷಗಳ ಅವಧಿಗೆ ಕೆಎಸ್ಡಿಎಲ್ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಂಡಿರುವುದಕ್ಕೆ ಕೆಲವರು ಅಪಸ್ವರ ಎತ್ತಿರುವುದಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ.

ಕೆಎ...