ಭಾರತ, ಫೆಬ್ರವರಿ 28 -- ಬಾಲಿವುಡ್‌ ನಟಿ ಕಿಯಾರಾ ಅಡ್ವಾಣಿ ಹಾಗೂ ಪತಿ ಸಿದ್ಧಾರ್ಥ್ ಮಲ್ಹೋತ್ರಾ ತಮ್ಮ ಮೊದಲ ಮಗುವನ್ನು ಬರ ಮಾಡಿಕೊಳ್ಳುವ ಸಿದ್ಧತೆಯಲ್ಲಿದ್ದಾರೆ. ಇಂದು (ಫೆ 28) ಇಬ್ಬರೂ ತಮ್ಮ ಕೈಯ್ಯಲ್ಲಿ ಮಗುವಿನ ಕಾಲ್ಚೀಲಗಳನ್ನು ಹಿಡಿದಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. "ನಮ್ಮ ಜೀವನದ ಶ್ರೇಷ್ಠ ಉಡುಗೊರೆ ಶೀಘ್ರದಲ್ಲೇ ಬರಲಿದೆ" ಎಂಬ ಶೀರ್ಷಿಕೆಯನ್ನು ಆ ಫೋಟೋದೊಂದಿಗೆ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಈ ಪೋಸ್ಟ್‌ ನೋಡಿ ಖುಷಿಪಟ್ಟಿದ್ದಾರೆ.

ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ತಾವು ಪಾಲಕರಾಗುತ್ತಿರುವ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಅಥವಾ ಅಂದಾಜು ದಿನಾಂಕ ಯಾವುದನ್ನೂ ಹಂಚಿಕೊಂಡಿಲ್ಲ. ಆದರೆ ತಾವು ತಂದೆ, ತಾಯಿ ಆಗುತ್ತಿರುವ ವಿಚಾರವನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಈ ಸ್ಟಾರ್ ಜೋಡಿಗೆ ಶುಭಾಶಯಗಳ ಸುರಿಮಳೆಯೇ ಹರಿದು ಬರುತ್ತಿದೆ. ಅವರ ಸಹೋದ್ಯೋಗಿಗಳು ಸಹ ತಮ್ಮ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

ಕೆಲ ಸೆಲ...