Mysuru, ಮೇ 23 -- ಮೈಸೂರು: ಮೌಲ್ಯಮಾಪಕರ ಯಡವಟ್ಟಿನಿಂದ 3 ಅಂಕ ಕಳೆದುಕೊಂಡಿದ್ದ ವಿದ್ಯಾರ್ಥಿ ಮರು ಮೌಲ್ಯಮಾಪನದ ಬಳಿಕ 625 ಅಂಕ ಗಳಿಸುವ ಮೂಲಕ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾನೆ ಮರು ಮೌಲ್ಯ ಮಾಪನದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಮೈಸೂರಿನ ಪ್ರತಿಷ್ಠಿತ ಶ್ರೀರಾಮಕೃಷ್ಣ ವಿದ್ಯಾಶಾಲೆಯ ವಿದ್ಯಾರ್ಥಿ ಎಂ ಎನ್ ತನ್ಮಯ್ ಮೈಸೂರಿನ ಯಾದವಗಿರಿಯಲ್ಲಿರುವ ವಸತಿ ಶಾಲೆಯಾದ ಶ್ರೀರಾಮಕೃಷ್ಣ ವಿದ್ಯಾಶಾಲೆಯ ವಿದ್ಯಾರ್ಥಿ ಎಂ ಎನ್ ತನ್ಮಯ್ ಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದಾಗ 622 ಅಂಕಗಳು ಲಭಿಸಿದ್ದವು.625ಕ್ಕೆ 625 ಅಂಕ ಬರುವ ನಿರೀಕ್ಷೆ ಇದ್ದ ತನ್ಮಯ್ ಗೆ ಕನ್ನಡ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಲ್ಲಿ ಒಂದೊಂದು ಅಂಕ ಕಡಿಮೆಯಾಗಿ 622 ಅಂಕ ಬಂದಿತ್ತು. 3 ಅಂಕ ಕಡಿಮೆ ಬಂದಿದ್ದರಿಂದ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಮರು ಮೌಲ್ಯಮಾಪನದ ಫಲಿತಾಂಶ ಬಂದಿದ್ದು 625 ಕ್ಕೆ 625 ಅಂಕ ಗಳಿಸಿರುವ ತನ್ಮಯ್ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳ ಸಾಲಿಗೆ ಸೇರಿದ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.