ಭಾರತ, ಫೆಬ್ರವರಿ 21 -- ಬೆಂಗಳೂರು: ಕರ್ನಾಟಕದಲ್ಲಿ ಸಾರ್ವಜನಿಕ ವಾಹನಗಳಿಗೆ ವೆಹಿಕಲ್ ಲೊಕೇಶನ್ ಟ್ರಾಕಿಂಗ್ ಡಿವೈಸ್‌ ಹಾಗೂ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಹಿಳೆಯರು ಹಾಗೂ ಮಕ್ಕಳ ಸುರಕ್ಷೆ ಹಾಗೂ ರಸ್ತೆ ಸುರಕ್ಷೆ ಹೆಚ್ಚಿಸುವುದಕ್ಕಾಗಿ ಈ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ಸಾರಿಗೆ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು ತಿಳಿಸಿದ್ದಾರೆ.

ಕೇಂದ್ರ ಮೋಟಾರು ವಾಹನ ಕಾಯ್ದೆ1989ರ ನಿಯಮ 125(ಹೆಚ್) ಪ್ರಕಾರ, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಹೊರಡಿಸಿರುವ ಅಧಿಸೂಚನೆ ಹಾಗೂ ಮಾರ್ಗಸೂಚಿಗಳ ಮೇರೆಗೆ, ಮಹಿಳೆ ಮತ್ತು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ನಿರ್ಭಯ ಯೋಜನೆಯಡಿ ಸಾರ್ವಜನಿಕ ಸೇವಾ ವಾಹನಗಳಾದ ಮಜಲು ವಾಹನ, ಶಾಲಾ ವಾಹನ, ಖಾಸಗಿ ಸೇವಾ ವಾಹನ, ಮ್ಯಾಕ್ಸಿ ಕ್ಯಾಬ್, ಒಪ್ಪಂದ ವಾಹನ, ಮೋಟಾರ್ ಕ್ಯಾಬ್ ಹಾಗೂ ರಾಷ್ಟ್ರೀಯ ರಹದಾರಿ ಹೊಂದಿದ ಸರಕು ಸಾಗಣೆ ವಾಹನಗಳಿಗೆ ವೆಹಿಕಲ್ ಲೊಕೇಶನ್ ಟ್ರಾಕಿಂಗ್ ಡಿವೈಸ್‌ ಹಾಗೂ ಎಮರ್ಜೆನ್ಸಿ ಪ್ಯಾನಿಕ್ ಬಟನ್ ...