ಭಾರತ, ಏಪ್ರಿಲ್ 21 -- ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ತೀರ್ಪು ಪ್ರಕಟಿಸುವ ನಿರ್ಧಾರದಿಂದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಮನೋಜ್‌ ಮಿಶ್ರಾ ಅವರ ದ್ವಿಸದಸ್ಯ ಪೀಠ ಸೋಮವಾರ (ಏ.21) ಹಿಂದೆ ಸರಿದಿದೆ.

ತೀರ್ಪು ಪ್ರಕಟಿಸುವುದಕ್ಕೆ ಬದಲಾಗಿ ಈ ಪೀಠ ಹೇಳಿದ್ದೇನೆಂದರೆ, 2018ರ ಜುಲೈನಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಗೆ ತಿದ್ದುಪಡಿ ತಂದು ಸೆಕ್ಷನ್ 17ಎ ಸೇರಿಸಲಾಗಿದೆ. ಸಾರ್ವಜನಿಕ ಸೇವಕನ ವಿರುದ್ಧ ಈ ಕಾಯ್ದೆಯ ಅಡಿಯಲ್ಲಿ ವಿಚಾರಣೆ, ತನಿಖೆ ಆರಂಭಿಸಲು ಪೊಲೀಸ್ ಅಧಿಕಾರಿಯು ಸಕ್ಷಮ ಪ್ರಾಧಿಕಾರದಿಂದ ಒಪ್ಪಿಗೆ ಪಡೆಯುವುದು ಕಡ್ಡಾಯ ಎಂದು ಈ ಸೆಕ್ಷನ್ ಹೇಳುತ್ತದೆ. ದ್ವಿಸದಸ್ಯ ಪೀಠವು ಹಿಂದೆ ಎರಡು ಪ್ರಕರಣಗಳಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ಸಾರ್ವಜನಿಕ ಸೇವಕರ ವಿರುದ್ಧ ವಿಚಾರಣೆ ಅಥವಾ ತನಿಖೆಯನ್ನು ಪ್ರಾರಂಭಿಸುವ ಮೊದಲು ಪೂರ್ವಾನುಮತಿ ಪಡೆಯುವ ವಿಷಯದ ಬಗ್ಗೆ ವಿಭಿನ್ನ ತೀರ್ಪು ನೀಡಿವೆ. ಹಾಗಾಗಿ ಪೂರ್ವಾನು...