ಭಾರತ, ಫೆಬ್ರವರಿ 5 -- ಯಾದಗಿರಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಬೈಕ್‌ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದರು. ಉಳಿದ ಇಬ್ಬರು ಆಸ್ಪತ್ರೆಗೆ ಸಾಗಿಸುವಾಗ ದಾರಿಮಧ್ಯದಲ್ಲೇ ಅಸುನೀಗಿದ್ದಾರೆ. ಸುರಪುರದಿಂದ ತಿಂಥಣಿ ಕಡೆಗೆ ಹೊರಟ್ಟಿದ್ದ ಬೈಕ್‌​ಗೆ ಸಾರಿಗೆ ಬಸ್ ಡಿಕ್ಕಿ ಹಿಡೆದಿದೆ. ಪರಿಣಾಮ ಬೈಕ್‌​ನಲ್ಲಿದ್ದ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದರು. ಗಂಭೀರ ಗಾಯಗಳೊಂದಿಗೆ ಇನ್ನಿಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಅವರು ಕೂಡಾ ಪ್ರಾಣ ಚೆಲ್ಲಿದ್ದಾರೆ.

ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ. ಆಂಜನೇಯ (35) ಅವರ ಪತ್ನಿ ಗಂಗಮ್ಮ (28), ಇವರ ಪುಟ್ಟ ಮಗು ಹನುಮಂತ(1), ಸಂಬಂಧಿಕರಾದ ಪವಿತ್ರ (5) ಹಾಗೂ ರಾಯಪ್ಪ (3) ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

KA 32 F 2684 ನಂಬರ್‌ ಪ್ಲೇಟ್‌ ಇರ...