ಭಾರತ, ಮೇ 25 -- ಯಾದಗಿರಿ: ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷ ಸ್ಥಾನ ಪತ್ನಿಯ ಕೈತಪ್ಪಿ ಹೋಯಿತು ಎಂದು ಆಕ್ರೋಶಗೊಂಡ ಪತಿ ಮತ್ತು ಆತನ ಸಹಚರರು ಶನಿವಾರ ಯಾದಗಿರಿ ನಗರದ ಕನಕ ವೃತ್ತದ ಸಮೀಪದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬೆಂಕಿ ಹೆಚ್ಚಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಯಾದಗಿರಿ ಜಿಲ್ಲಾ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಮಂಜುಳಾ ಗೂಳಿ ಅವರನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ಕುರಿತು ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಕಾಂಗ್ರೆಸ್ ಕಚೇರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮಂಜುಳಾ ಗೂಳಿ ಅವರ ಪತಿ ಉಪನ್ಯಾಸಕ ಶಂಕರ ಗೂಳಿಯನ್ನು ಪೊಲೀಸರು ಬಂಧಿಸಿದ್ದು, ಸಹಚರ ಬಾಬುಗೌಡ ಅಗತೀರ್ಥ ಎಂಬಾತನಿಗೆ ಶೋಧ ನಡೆಸಿದ್ದಾರೆ.
ಪತ್ನಿಗೆ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷ ಸ್ಥಾನ ಕೈ ತಪ್ಪಿ ಹೋದ ಕಾರಣ, ಶಂಕರ ಗೂಳಿ ತೀವ್ರ ಆಕ್ರೋಶಗೊಂಡಿದ್ದರು. ಅಸಮಾಧಾನವನ್ನೂ ಹೊರಹಾಕಿದ್ದರು. ಈ ನಡುವೆ, ಶನಿವಾರ ಬೆಳಗಿನ ಜಾವ ಯಾದಗಿರಿ ನಗರದ ಕನಕ ವೃತ್ತದ ಸಮೀಪದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.