ಭಾರತ, ಮೇ 13 -- ಸಿಬಿಎಸ್‌ಇ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟವಾಗಿದೆ. ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಮೇ 13ರಂದು ಮೊದಲಿಗೆ 12ನೇ ತರಗತಿ ಹಾಗೂ ನಂತರ 10ನೇ ತರಗತಿ ಫಲಿತಾಂಶ ಪ್ರಕಟಿಸಿದೆ. 10ನೇ ತರಗತಿಯಲ್ಲಿ ಉತ್ತೀರ್ಣರಾದರ ಪ್ರಮಾಣ ಶೇಕಡಾ 93.66ರಷ್ಟಿದೆ. ಕಳೆದ ವರ್ಷದ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಶೇಕಡಾ 0.06ರಷ್ಟು ಹೆಚ್ಚಾಗಿದೆ. 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣ ಶೇಕಡಾ 88.39ರಷ್ಟು ಫಲಿತಾಂಶ ಬಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 0.41 ರಷ್ಟು ಹೆಚ್ಚಳವಾಗಿದೆ.

ಫಲಿತಾಂಶ ಪ್ರಕಟದ ನಂತರ, ಫಲಿತಾಂಶವು ವಿದ್ಯಾರ್ಥಿಗಳಿಗೆ ಸಮಾಧಾನ ತರದಿದ್ದರೆ, ಅಂಥಾ ವಿದ್ಯಾರ್ಥಿಗಳು ಮೌಲ್ಯಮಾಪನ ಮಾಡಿದ ತಮ್ಮ ಉತ್ತರ ಪತ್ರಿಕೆಯ ಫೋಟೋಕಾಪಿಗೆ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆ ನೋಡಿದ ನಂತರ ಫಲಿತಾಂಶದಲ್ಲಿ ಹೆಚ್ಚಳವಾಗುವ ನಿರೀಕ್ಷೆ ಇದ್ದರೆ, ಅಂಕಗಳ ಪರಿಶೀಲನೆ ಅಥವಾ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು.

ಫಲಿತಾಂಶ ಪ್ರಕಟವಾದ ನಂತರ ಪೂರಕ ಪರೀಕ್ಷೆಗೆ ಹಾಜರಾಗುವ ಕುರಿತು ...