Suttur, ಜನವರಿ 31 -- ಮೈಸೂರು: ಕರ್ನಾಟಕದಲ್ಲಿ ಹೆಚ್ಚಿರುವ ಮೈಕ್ರೋ ಫೈನಾನ್ಸ್ ಗಳ ವಸೂಲಿ ಕ್ರಮಕ್ಕೆ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ನಿಮ್ಮ ಜೊತೆಗಿದೆ. ತೊಂದರೆ ಕೊಟ್ಟರೆ ದೂರು ಕೊಡಿ. ಕಾನೂನು ಕ್ರಮ ತಗೊತೀವಿ.ಮೈಕ್ರೋ ಫೈನಾನ್ಸ್ ಹಾವಳಿ ವಿಚಾರವೂ ಸಾಕಷ್ಟು ಚರ್ಚೆಗಳಾಗುತ್ತಿವೆ. ಜನ ಎಲ್ಲಿ ಸಾಲ ಸಿಗುತ್ತೋ ಅಲ್ಲಿಗೆ ಹೋಗುತ್ತಿದ್ದಾರೆ. ಅಲ್ಲಿ ಹೆಚ್ಚು ಬಡ್ಡಿ ಹಾಕುತ್ತಿದ್ದಾರೆ. ಗೂಂಡಾಗಳನ್ನು ಬಳಸಿಕೊಂಡು ಹಣ ವಸೂಲಿ ಮಾಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್ ಗಳು ಆರ್‌ಬಿಐನ ನಿಯಮದಡಿ ಬರುತ್ತವೆ. ಇನ್ನೂ ಸುಗ್ರೀವಾಜ್ನೆ ಹೊರಡಿಸಿಲ್ಲ‌. ಸದ್ಯವೇ ಸುಗ್ರೀವಾಜ್ಞೆಯನ್ನು ಜಾರಿಗೊಳಿಸಿ ಕಠಿಣ ಕಾನೂನನ್ನು ಜಾರಿಗೆ ತರುತ್ತೇವೆ. ಸುಗ್ರೀವಾಜ್ಞೆ ಹೊರಡಿಸಿದ ನಂತರ ಇದಕ್ಕೆ ಕಡಿವಾಣ ಬೀಳಲಿದೆ ಎನ್ನುವುದು ಸಿಎಂ ಸಿದ್ದರಾಮಯ್ಯ ಅವರ ಖಚಿತ ನಿಲುವು

ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ ದರ್ಶನ ಪಡೆ...