ಭಾರತ, ಮಾರ್ಚ್ 22 -- ಐಪಿಎಲ್‌ 18ನೇ ಆವೃತ್ತಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಇಂದಿನಿಂದ (ಮಾರ್ಚ್ 22) ಮೇ 25ರವರೆಗೆ ದೇಶದಲ್ಲಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಕಲರವ ಮನೆ ಮಾಡಲಿದೆ. ಉದ್ಘಾಟನಾ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದ್ದು, ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಭಾರತದಲ್ಲಿ ಅಭಿಮಾನಿಗಳು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ಐಪಿಎಲ್ 2025ರ ಎಲ್ಲಾ ಪಂದ್ಯಗಳನ್ನು ನೇರಪ್ರಸಾರ ವೀಕ್ಷಿಸಬಹುದು. ಇದೇ ವೇಳೆ ಜಿಯೋಹಾಟ್‌ಸ್ಟಾರ್‌ ಮೂಲಕ ಚಂದಾದಾರರಾಗಿ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

ಐಪಿಎಲ್‌ ಪಂದ್ಯಾವಳಿಯಲ್ಲಿ ದೇಶ ವಿದೇಶಗಳ ಸ್ಟಾರ್‌ ಆಟಗಾರರು ಆಡುತ್ತಿದ್ದಾರೆ. ಹೀಗಾಗಿ ವಿದೇಶಗಳಲ್ಲಿಯೂ ಟೂರ್ನಿಯ ನೇರಪ್ರಸಾರ ಇರುತ್ತದೆ. ಹೀಗಾಗಿ ಬೇರೆ ಬೇರೆ ದೇಶಗಳಲ್ಲಿ ಐಪಿಎಲ್‌ ನೇರಪ್ರಸಾರ ಎಲ್ಲಿರಲಿದೆ ಎಂಬುದನ್ನು ನೋಡೋಣ.

ಭಾರತದಲ್ಲಿ ಐಪಿಎಲ್‌ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರಪ್ರಸಾರ ಮಾ...