Bangalore, ಮಾರ್ಚ್ 26 -- ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್ ಆರ್ ಟಿಸಿ) ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ 2000 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಈ ವಿಶೇಷ ಬಸ್‌ಗಳು ಮಾರ್ಚ್ 28 ರಿಂದ 30 ರವರೆಗೆ ಮೂರು ದಿನ ಬೆಂಗಳೂರಿನಿಂದ ರಾಜ್ಯ, ಹೊರ ರಾಜ್ಯದ ಪ್ರಮುಖ ಸ್ಥಳಗಳಿಗೆ ಸಂಚಾರ ನಡೆಸಲಿದ್ದು, ಮುಂಗಡ ಬುಕ್ಕಿಂಗ್ ಗೆ ಅವಕಾಶ ಕಲ್ಪಿಸಲಾಗಿದೆ. ಮಾರ್ಚ್ 30 ರಂದು ಚಂದ್ರಮಾನ ಯುಗಾದಿ, ಮಾರ್ಚ್ 31 ರಂದು ರಂಜಾನ್ ಹಬ್ಬವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಬೆಂಗಳೂರಿನಿಂದ ತಮ್ಮ ಊರುಗಳಿಗೆ ತೆರಳುತ್ತಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಸಾಮಾನ್ಯ ಸಾರಿಗೆ, ಐರಾವತ, ಸ್ಲೀಪರ್ ಕೋಚ್ ಸೇರಿ ಎಲ್ಲಾ ಐಷಾರಾಮಿ ಬಸ್‌ಗಳು ಸಂಚರಿಸಲಿವೆ. ಮುಂಗಡ ಬುಕ್ಕಿಂಗ್ ಮೂಲಕವೂ ಪ್ರಯಾಣ ಮಾಡಲು ಬೇಕಾದ ವ್ಯವಸ್ಥೆಯನ್ನು ಸಾರಿಗೆ ಸಂಸ್ಥೆಯು ಮಾಡಿಕೊಂಡಿದೆ.
ಮಾರ್ಚ್ 30ರಂದು ಚಂದ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.