ಭಾರತ, ಮಾರ್ಚ್ 30 -- ಯುಗಾದಿ ಹಬ್ಬಕ್ಕೆ ಮೆಗಾಸ್ಟಾರ್ ಚಿರಂಜೀವಿ ಹೊಸ ಸಿನಿಮಾ ಸೆಟ್ಟೇರಿದೆ. ಹೈದರಾಬಾದ್ ನಲ್ಲಿಂದು ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಚಿತ್ರಕ್ಕೆ ವಿಕ್ಟರಿ ವೆಂಕಟೇಶ್ ಕ್ಲ್ಯಾಪ್ ಮಾಡಿದರು. ನಿರ್ಮಾಪಕ ಅಲ್ಲು ಅರವಿಂದ್ ಕ್ಯಾಮೆರಾಗೆ ಚಾಲನೆ ನೀಡಿದರು. ಖ್ಯಾತ ನಿರ್ದೇಶಕ ಕೆ. ರಾಘವೇಂದ್ರ ಫಸ್ಟ್ ಶಾಟ್ ಗೆ ಆಕ್ಷನ್ ಕಟ್ ಹೇಳಿದರು. ಖ್ಯಾತ ನಿರ್ಮಾಪಕರಾದ ದಿಲ್ ರಾಜು ಹಾಗೂ ಸಿರೀಶ್ ಸ್ಕ್ರಿಪ್ಟ್ ಹಸ್ತಾಂತರಿಸಿದರು. ಮುಹೂರ್ತ ಸಮಾರಂಭದಲ್ಲಿ ನಿರ್ದೇಶಕರಾದ ಬಾಬಿ, ವಸಿಷ್ಠ, ಶ್ರೀಕಾಂತ್ ಒಡೆಲಾ, ಖ್ಯಾತ ಕಥೆಗಾರ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಚಿರು 157ನೇ ಚಿತ್ರಕ್ಕೆ ಸಂಕ್ರಾಂತಿಕಿ ವಸ್ತುನ್ನಾಂ ಖ್ಯಾತಿಯ ನಿರ್ದೇಶಕ ಅನಿಲ್ ರವಿಪುಡಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮೂಲಕ ಮೆಗಾಸ್ಟಾರ್ ಅವರನ್ನು ಹೊಸ ಅವತಾರದಲ್ಲಿ ಪರಿಚಯಿಸಲು ರೆಡಿಯಾಗಿದ್ದಾರೆ. ಶಂಕರ್ ವರಪ್ರಸಾದ್ ಎಂಬ ಪಾತ್ರದಲ್ಲಿ ಚಿರಂಜೀವಿ ನಟಿಸಲಿದ್ದಾರೆ.ಅನಿಲ್ ರವಿಪುಡಿ ಮನರಂಜನೆಗೆ ಎ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.