ಭಾರತ, ಮಾರ್ಚ್ 28 -- ಯುಗಾದಿ ಆರೋಗ್ಯ ವರ್ಷ ಭವಿಷ್ಯ: ಪಂಚಾಂಗದ ಪ್ರಕಾರ ಕೆಲವೇ ದಿನಗಳಲ್ಲಿ ಹಳೆಯ ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಡುತ್ತೇವೆ. ಯುಗಾದಿ ಹಬ್ಬವು ಹೊಸ ವರ್ಷದ ಮೊದಲ ದಿನ. ಈ ಹೊಸ ವರ್ಷದಲ್ಲಿ ಸಂಕಷ್ಟಗಳು ಕಳೆದು ಸುಖ, ಶಾಂತಿ, ನೆಮ್ಮದಿ, ಉತ್ತಮ ಆರೋಗ್ಯ, ಹೊಸ ಅವಕಾಶ, ಸಂಪತ್ತು ಸಮೃದ್ಧಿಯನ್ನು ನಿರೀಕ್ಷಿಸುತ್ತ ಆಶಾವಾದಿಗಳಾಗಿ ಬದುಕುವುದು ಸಾಮಾನ್ಯ. ಬಹುತೇಕ ಸಂದರ್ಭದಲ್ಲಿ ಜನರು ತಮ್ಮ ರಾಶಿಗೆ ಅನುಗುಣವಾಗಿ ವರ್ಷ ಭವಿಷ್ಯವನ್ನು ಕಾತರದಿಂದ ವೀಕ್ಷಿಸುತ್ತಾರೆ. ತಮ್ಮ ಆರೋಗ್ಯ ಭವಿಷ್ಯ ಹೇಗಿರಲಿದೆ ಎಂದು ತಿಳಿದುಕೊಳ್ಳುವವರು ಇದ್ದಾರೆ. ಶ್ರೀ ವಿಶ್ವಾವಸು ಸಂವತ್ಸರದ ಮೇಷದಿಂದ ಮೀನದವರಿಗೆ ನಾಲ್ಕು ರಾಶಿಯವರ ಆರೋಗ್ಯ ವರ್ಷ ಭವಿಷ್ಯ ಇಲ್ಲಿದೆ.

ಕಣ್ಣಿಗೆ ಸಂಬಂಧಪಟ್ಟಂತೆ ಎಚ್ಚರಿಕೆ ವಹಿಸುವುದು ಒಳ್ಳೆಯದು. ಕಲುಷಿತ ನೀರು ಅಥವಾ ದ್ರವ ಆಹಾರವನ್ನು ಸೇವಿಸಿದರೆ ಸೋಂಕಿನಿಂದ ಬಳಲಬೇಕಾಗುತ್ತದೆ. ಆದ್ದರಿಂದ ದಿನ ನಿತ್ಯ ಸೇವಿಸುವ ಆಹಾರ ಪದಾರ್ಥಗಳ ಬಗ್ಗೆ ಗಮನಹರಿಸಬೇಕು. ರುಚಿಗಿಂತ ಶುಚಿಯೇ ಮುಖ್ಯವಾಗುತ್ತದೆ...