ಭಾರತ, ಮಾರ್ಚ್ 28 -- ಯುಗಾದಿ ಪ್ರೇಮ ಭವಿಷ್ಯ: ಪಂಚಾಂಗದ ಪ್ರಕಾರ ಕೆಲವೇ ದಿನಗಳಲ್ಲಿ ಹಳೆಯ ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಡುತ್ತೇವೆ. ಯುಗಾದಿ ಹಬ್ಬವು ಹೊಸ ವರ್ಷದ ಮೊದಲ ದಿನ. ಈ ಹೊಸ ವರ್ಷದಲ್ಲಿ ಸಂಕಷ್ಟಗಳು ಕಳೆದು ಸುಖ, ಶಾಂತಿ, ನೆಮ್ಮದಿ, ಉತ್ತಮ ಆರೋಗ್ಯ, ಹೊಸ ಅವಕಾಶ, ಸಂಪತ್ತು ಸಮೃದ್ಧಿಯನ್ನು ನಿರೀಕ್ಷಿಸುತ್ತ ಆಶಾವಾದಿಗಳಾಗಿ ಬದುಕುವುದು ಸಾಮಾನ್ಯ. ಬಹುತೇಕ ಸಂದರ್ಭದಲ್ಲಿ ಜನರು ತಮ್ಮ ರಾಶಿಗೆ ಅನುಗುಣವಾಗಿ ವರ್ಷ ಭವಿಷ್ಯವನ್ನು ಕಾತರದಿಂದ ವೀಕ್ಷಿಸುತ್ತಾರೆ. ತಮ್ಮ ಪ್ರೇಮ ಭವಿಷ್ಯ ಹೇಗಿರಲಿದೆ ಎಂದು ತಿಳಿದುಕೊಳ್ಳುವವರು ಇದ್ದಾರೆ. ಶ್ರೀ ವಿಶ್ವಾವಸು ಸಂವತ್ಸರದ ಮೇಷದಿಂದ ಕಟಕದವರಿಗೆ ನಾಲ್ಕು ರಾಶಿಯವರ ಪ್ರೇಮ ವರ್ಷ ಭವಿಷ್ಯ ಇಲ್ಲಿದೆ.

ಮೇಷ ರಾಶಿಯವರ ದಾಂಪತ್ಯ ಜೀವನವು ಸಂತೋಷದಿಂದ ಕೂಡಿರುತ್ತದೆ. ಆತ್ಮೀಯರ ಸಹಾಯದಿಂದ ಸಂಬಂಧಿಕರ ಅಥವಾ ಪರಿಚಯದವರ ಜೊತೆಯಲ್ಲಿ ವಿವಾಹವಾಗುತ್ತದೆ. ಕುಟುಂಬದಲ್ಲಿ ಪರಸ್ಪರ ವಿರೋಧವಿದ್ದರೂ ದಿನದಿಂದ ದಿನಕ್ಕೆ ಅನ್ಯೋನ್ಯತೆ ಮೂಡುತ್ತದೆ. ಆತುರದ ನಿರ್ಧಾರಗಳನ್ನು ತೆಗೆದುಕೊಳ್...