Bengaluru, ಮಾರ್ಚ್ 28 -- ಯುಗಾದಿ ಹಣಕಾಸು ವರ್ಷ ಭವಿಷ್ಯ: ಪಂಚಾಂಗದ ಪ್ರಕಾರ ಕೆಲವೇ ದಿನಗಳಲ್ಲಿ ಹಳೆಯ ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಡುತ್ತೇವೆ. ಯುಗಾದಿ ಹಬ್ಬವು ಹೊಸ ವರ್ಷದ ಮೊದಲ ದಿನ. ಈ ಹೊಸ ವರ್ಷದಲ್ಲಿ ಸಂಕಷ್ಟಗಳು ಕಳೆದು ಸುಖ, ಶಾಂತಿ, ನೆಮ್ಮದಿ, ಉತ್ತಮ ಆರೋಗ್ಯ, ಹೊಸ ಅವಕಾಶ, ಸಂಪತ್ತು ಸಮೃದ್ಧಿಯನ್ನು ನಿರೀಕ್ಷಿಸುತ್ತ ಆಶಾವಾದಿಗಳಾಗಿ ಬದುಕುವುದು ಸಾಮಾನ್ಯ. ಬಹುತೇಕ ಸಂದರ್ಭದಲ್ಲಿ ಜನರು ತಮ್ಮ ರಾಶಿಗೆ ಅನುಗುಣವಾಗಿ ವರ್ಷ ಭವಿಷ್ಯವನ್ನು ಕಾತರದಿಂದ ವೀಕ್ಷಿಸುತ್ತಾರೆ. ತಮ್ಮ ಹಣಕಾಸು ಭವಿಷ್ಯ ಹೇಗಿರಲಿದೆ ಎಂದು ತಿಳಿದುಕೊಳ್ಳುವವರು ಇದ್ದಾರೆ. ಶ್ರೀ ವಿಶ್ವಾವಸು ಸಂವತ್ಸರದ ಮೇಷದಿಂದ ಕಟಕದವರಿಗೆ ನಾಲ್ಕು ರಾಶಿಯವರ ಹಣಕಾಸು ವರ್ಷ ಭವಿಷ್ಯ ಇಲ್ಲಿದೆ.

ಹಣಕಾಸಿನ ವಿಚಾರದಲ್ಲಿ ಜವಾಬ್ದಾರಿಯಿಂದ ನಡೆದುಕೊಳ್ಳುವುದಿಲ್ಲ. ಅವಶ್ಯಕತೆ ಇಲ್ಲದ ವಿಚಾರಗಳಿಗೆ ಹಣವನ್ನು ಖರ್ಚು ಮಾಡುವಿರಿ. ಹಣದ ವಿಚಾರದಲ್ಲಿ ಮೋಸ ಹೋಗುವ ಸಾಧ್ಯತೆಗಳಿವೆ ಎಚ್ಚರಿಕೆ ಇರಲಿ. ಕಷ್ಟದಲ್ಲಿ ಇದ್ದವರಿಗೆ ಹಣ ಸಹಾಯ ಮಾಡುವಿರಿ. ಕೂಡಿಟ್ಟ ಹ...