Bangalore, ಏಪ್ರಿಲ್ 19 -- ಬೆಂಗಳೂರು: ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗುರುವಾರ ಮುಗಿದಿದ್ದು, ಶುಕ್ರವಾರವೇ ಎಲ್ಲ ನಾಲ್ಕು ವಿಷಯಗಳ 16 ವರ್ಷನ್‌ಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಭೌತವಿಜ್ಞಾನ, ರಸಾಯನವಿಜ್ಞಾನ, ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಕೀ ಉತ್ತರಗಳನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳು ಇದ್ದಲ್ಲಿ ಏ.22ರ ಸಂಜೆ 5 ಗಂಟೆ ಒಳಗೆ ಆನ್‌ಲೈನ್‌ ಮೂಲಕ ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆಕ್ಷೇಪಣೆ ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್‌ ಕೋಡ್‌, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು ಪಿಡಿಎಫ್‌ ರೂಪದಲ್ಲಿ ಸಲ್ಲಿಸಬೇಕು. ಈ ಮಾಹಿತಿ ಸರಿ ಇಲ್ಲದಿದ್ದಲ್ಲಿ ಅಂತಹ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಮ್ಮ ಸಿಇಟಿ ಅರ್ಜಿಯಲ್ಲಿ ಇನ್ನೂ ಏನಾದರೂ ತಪ್ಪುಗಳಿದ್ದು, ಅವುಗ...