ಭಾರತ, ಮಾರ್ಚ್ 19 -- ಮುಂಬೈ: ಟೀಮ್‌ ಇಂಡಿಯಾ ಕ್ರಿಕೆಟಿಗ ಯುಜುವೇಂದ್ರ ಚಹಲ್ ಮತ್ತು ನೃತ್ಯ ಸಂಯೋಜಕಿ ಧನಶ್ರೀ ವರ್ಮಾ ಅವರ ವಿಚ್ಛೇದನದ ಕುರಿತು ಗುರುವಾರ (ಮಾರ್ಚ್‌ 20) ಅಂತಿಮ ತೀರ್ಪು ಪ್ರಕಟವಾಗಲಿದೆ. ಈ ಕುರಿತು ಕೌಟುಂಬಿಕ ನ್ಯಾಯಾಲಯಕ್ಕೆ ಬಾಂಬೆ ಹೈಕೋರ್ಟ್ ಬುಧವಾರ (ಮಾ.19) ಆದೇಶಿಸಿದೆ. ವಿಚ್ಛೇದನ ಪ್ರಕರಣದಲ್ಲಿ ಕಡ್ಡಾಯವಾದ ಆರು ತಿಂಗಳ ಕೂಲಿಂಗ್-ಆಫ್ ಅವಧಿಯನ್ನು ಮನ್ನಾ ಮಾಡಲು ಕೋರ್ಟ್‌ ಅನುಮತಿ ನೀಡಿದೆ. ಐಪಿಎಲ್‌ನಲ್ಲಿ ಚಹಲ್ ಆಡಬೇಕಿರುವುದರಿಂದ, ಮಾರ್ಚ್ 20 ರೊಳಗೆ ವಿಚ್ಛೇದನ ಪ್ರಕ್ರಿಯೆಗಳನ್ನು ಅಂತಿಮಗೊಳಿಸುವಂತೆ ನ್ಯಾಯಾಲಯವು ಕುಟುಂಬ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಹೀಗಾಗಿ ನಾಳೆ ಚಹಲ್-ಧನಶ್ರೀ ಡಿವೋರ್ಸ್‌ ಕೇಸ್‌ ಮುಕ್ತಾಯವಾಗುವ ಸಾಧ್ಯತೆ ಇದೆ.

ಎರಡೂವರೆ ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿರುವ ಯಜುವೇಂದ್ರ ಚಹಲ್ ಮತ್ತು ಧನಶ್ರೀ ವರ್ಮಾ, ವಿಚ್ಛೇದನ ಪಡೆಯಲು ಅವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದರು. ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 13ಬಿ ಪ್ರಕಾರ, ವಿಚ್ಛೇದನ ಬಯಸುವ ಜೋಡಿಗಳಿಗೆ ಆರ...