Bengaluru, ಮೇ 10 -- ನವದೆಹಲಿ: ಯುದ್ಧದ ಮಧ್ಯೆ ಪಾಕಿಸ್ತಾನಕ್ಕೆ ಮತ್ತೊಂದು ಆಘಾತ ಎದುರಾಗಿದೆ. ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆಯ ಭೂಕಂಪನವು ಶನಿವಾರ ಮುಂಜಾನೆ 1:44 ಕ್ಕೆ ಪಾಕಿಸ್ತಾನವನ್ನು ಅಪ್ಪಳಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದಲ್ಲಿ ಯಾವುದೇ ಹಾನಿ ಅಥವಾ ಗಾಯಗಳು ಉಂಟಾಗಿರುವ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ ಎಂದು ಅದು ತಿಳಿಸಿದೆ.

ಎನ್‌ಸಿಎಸ್ ಪ್ರಕಾರ, ಭೂಕಂಪವು 10 ಕಿಲೋಮೀಟರ್ ಆಳದಲ್ಲಿ 29.67 ಉತ್ತರ ಅಕ್ಷಾಂಶ ಮತ್ತು 66.10 ಪೂರ್ವ ರೇಖಾಂಶದೊಂದಿಗೆ ಸಂಭವಿಸಿದೆ.

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಸೋಮವಾರ ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆಯ ಭೂಕಂಪನ ಸಂಭವಿಸಿದ ನಂತರ, ಶುಕ್ರವಾರ ತಡರಾತ್ರಿ ಮತ್ತೆ ಭೂಕಂಪ ಸಂಭವಿಸಿದೆ. ಎನ್‌ಸಿಎಸ್ ಪ್ರಕಾರ, ಭೂಕಂಪವು 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಭೂಕಂಪದಿಂದ ಉಂಟಾಗಿರುವ ಹಾನಿಯ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ.

Published by HT Digital Content Services with permission from HT Kannada....