ಭಾರತ, ಮೇ 10 -- ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆ ಮಧ್ಯಪ್ರವೇಶಿಸಿರುವ ಅಮೆರಿಕ, ಉಭಯ ರಾಷ್ಟ್ರಗಳನ್ನು ಶಾಂತಗೊಳಿಸುವಲ್ಲಿ ಯಶಸ್ವಿಯಾಗಿದೆ. ಅಮೆರಿಕ ಮಧ್ಯಸ್ಥಿಕೆಯಲ್ಲಿ ನಡೆದ ಸುದೀರ್ಘ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನ ತಕ್ಷಣವೇ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಸಂಪೂರ್ಣವಾಗಿ ಕದನ ವಿರಾಮ ಘೋಷಣೆಯಾಗಿದೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಕದನ ವಿರಾಮಕ್ಕೆ ಉಭಯ ರಾಷ್ಟ್ರಗಳು ಒಪ್ಪುವುದರೊಂದಿಗೆ ಎರಡು ರಾಷ್ಟ್ರಗಳ ನಡುವೆ ಯುದ್ಧದ ಭೀತಿ ಅಂತ್ಯವಾಗಿದೆ. ಕಳೆದ ಕೆಲವು ದಿನಗಳಿಂದ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿದ್ದು, ಕದನ ವಿರಾಮದೊಂದಿಗೆ ದೊಡ್ಡ ಭೀತಿ ಅಂತ್ಯವಾಗಿದೆ. ಸಂಘರ್ಷವನ್ನು ಪರಿಹರಿಸುವಲ್ಲಿ ಬುದ್ಧಿವಂತಿಕೆಯನ್ನು ಪ್ರದರ್ಶಿಸಿದ್ದಕ್ಕಾಗಿ ಅವರು ಎರಡೂ ದೇಶಗಳನ್ನು ಟ್ರಂಪ್‌ ಅಭಿನಂದಿಸಿದ್ದಾರೆ.

"ಅಮೆರಿಕದ ಮಧ್ಯಸ್ಥಿಕೆಯಲ್ಲಿ ಸುದೀರ್ಘ ರಾತ್ರಿಯ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನವು ಸಂಪೂರ್ಣ ಮತ್ತು ತಕ್ಷಣದಿ...